BJP–JDS ಮೈತ್ರಿಗೆ ಗೊಂದಲ?

BJP–JDS ಮೈತ್ರಿಗೆ ಗೊಂದಲ?

ಸ್ಥಳೀಯ ಚುನಾವಣೆಗಳಲ್ಲಿ ಪ್ರತ್ಯೇಕ ದಾರಿ.

ಬೆಂಗಳೂರು: ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. ಮತ್ತೊಂದೆಡೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ವಂತ ಬಲದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದು, ಈ ಬಗ್ಗೆ ಪ್ರತಿಕ್ರಿಯಿಸಲು ದೇವೇಗೌಡ ನಿರಾಕರಿಸಿದ್ದಾರೆ. ಈ ಬೆಳವಣಿಗೆಗಳು, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಲ್ಲಿ ಗೊಂದಲ, ಬಿರುಕು ಹೆಚ್ಚಾಗುತ್ತಿದೆಯಾ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಹೆಚ್​ಡಿ ದೇವೇಗೌಡರು ಹೇಳಿದ್ದೇನು?

ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ದೇವೇಗೌಡ, ನಾವು ಲೋಕಸಭೆ, ವಿಧಾನಸಭೆ ಮತ್ತು ಪರಿಷತ್ತಿನ ಚುನಾವಣೆಗಳಲ್ಲಿ ಬಿಜೆಪಿ ಮೈತ್ರಿಯೊಂದಿಗೆ ಸ್ಪರ್ಧಿಸಲಿದ್ದೇವೆ. ಬಿಜೆಪಿ ರಾಜ್ಯ ಅಧ್ಯಕ್ಷರು ಹೇಳಿರುವ ವಿಚಾರದ ಬಗ್ಗೆ ನಾನು ಯಾವುದೇ ಪ್ರಶ್ನೆಗಳನ್ನು ಎತ್ತುವುದಿಲ್ಲ. ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿಯೂ ಜೆಡಿಎಸ್ ಸ್ವಂತ ಬಲದ ಮೇಲೆ ಸ್ಪರ್ಧಿಸಲಿದೆ ಎಂದು ಹೇಳಿದ್ದಾರೆ.

ಕಳೆದ ಲೋಕಸಭೆ ಚುನಾವಣೆ ವೇಳೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಜೆಡಿಎಸ್, ಆ ಮೂಲಕ ಎನ್​ಡಿಎ ಮಿತ್ರಕೂಟದ ಭಾಗವಾಗಿದೆ. ಇದೀಗ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಲಿವೆ.

ಬಿವೈ ವಿಜಯೇಂದ್ರ ಹೇಳಿದ್ದೇನು?

4 ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಅಧಿಕಾರ ಹಿಡಿದ ಕೂಡಲೇ ಬಿಜೆಪಿ ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯುವ ಲೆಕ್ಕಾಚಾರಕ್ಕೆ ಇಳಿದಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ವಿಜಯೇಂದ್ರ ಹೇಳಿದ್ದಾರೆ. ಇದು, 2028ರ ವಿಧಾನಸಭೆ ವೇಳೆಗೆ ಬಿಜೆಪಿ, ಜೆಡಿಎಸ್ ಮೈತ್ರಿ ಮುರಿದು ಬೀಳುತ್ತಾ ಎಂಬ ಪ್ರಶ್ನೆ ಮೂಡಲು ಕಾರಣವಾಗಿದೆ. ಆದರೆ, ವಿಜಯೇಂದ್ರ ಹೇಳಿಕೆ ಬಗ್ಗೆ ಜಾಣತನದಿಂದ ಪ್ರತಿಕ್ರಿಯಿರುವ ದೇವೇಗೌಡರು, ಆ ಬಗ್ಗೆ ಪ್ರಶ್ನೆ ಮಾಡಲು ಹೋಗುವುದಿಲ್ಲ ಎಂದಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *