ಕೇರಳಿಗರ ‘ಚೇಟಾ ಸಿದ್ದರಾಮಯ್ಯ’ ಕೇರಳಕ್ಕಾಗಿ ಈವರೆಗೆ ಏನೇನು ಮಾಡಿದ್ರು?

ಕೇರಳಿಗರ ‘ಚೇಟಾ ಸಿದ್ದರಾಮಯ್ಯ’ ಕೇರಳಕ್ಕಾಗಿ ಈವರೆಗೆ ಏನೇನು ಮಾಡಿದ್ರು?

‘ಚೇಟಾ ಸಿದ್ದರಾಮಯ್ಯ’ ಎಂದು ಸಿಎಂ ವಿರುದ್ಧ ಜೆಡಿಎಸ್ ವಾಗ್ದಾಳಿ.

ಬೆಂಗಳೂರು : ಬೆಂಗಳೂರಿನ ಕೋಗಿಲು ಕ್ರಾಸ್ ಬಡಾವಣೆಯಲ್ಲಿ ಅಕ್ರಮ ಶೆಡ್​​ಗಳ ತೆರವು ಹಾಗೂ ನಂತರದ ಬೆಳವಣಿಗೆಗಳು ಕರ್ನಾಟಕದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆ ಬೆನ್ನಲ್ಲೇ ತಕ್ಷಣವೇ ಅಕ್ರಮ ಶೆಡ್​ಗಳಲ್ಲಿ ವಾಸಿಸುತ್ತಿದ್ದ ಕೇರಳಿಗರಿಗೆ ಮನೆ ನೀಡಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರ, ಪ್ರವಾಹ ಸೇರಿದಂತೆ ಪ್ರಾಕೃತಿಕ ವಿಕೋಪಗಳಿಂದ ನಿರಾಶ್ರಿತರಾದ ಕನ್ನಡಿಗರಿಗೇ ವರ್ಷಗಳಿಂದ ಪರಿಹಾರ ನೀಡದೇ ಇರುವ ವಿಚಾರ ಮುನ್ನೆಲೆಗೆ ಬಂದಿದೆ. ಇದೀಗ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಎಕ್ಸ್ ಮೂಲಕ ವಾಗ್ದಾಳಿ ನಡೆಸಿದ್ದು, ಸಿಎಂ ಸಿದ್ದರಾಮಯ್ಯ ಅವರನ್ನು ಕೇರಳಿಗರ ‘ಚೇಟಾ ಸಿದ್ದರಾಮಯ್ಯ’ ಎಂದು ಜರೆದಿದೆ. ಅಲ್ಲದೆ, ಕೇರಳಕ್ಕಾಗಿ ಸಿದ್ದರಾಮಯ್ಯ ಈವರೆಗೆ ಏನೇನು ಮಾಡಿದ್ದಾರೆ ಎಂಬ ಪಟ್ಟಿ ನೀಡಿದೆ.

‘ಇದೊಂದು ಪ್ರಕರಣಕ್ಕೆ ಮಾತ್ರ ಸೀಮಿತ’ ಎಂದು ತಿಪ್ಪೇಸಾರುವ ಕೇರಳಿಗರ ಚೇಟಾ ಸಿದ್ದರಾಮಯ್ಯ ಅವರ ವಸತಿ ರಹಿತ ಕನ್ನಡಿಗರಿಗೆ ಮಿಡಿಯದ ಮಾನವೀಯತೆ, ಕೇರಳದ ಅಕ್ರಮ ವಲಸಿಗರಿಗೆ ಮಿಡಿಯುತ್ತಿರುವ ಇಬ್ಭಗೆ ನೀತಿಗೆ ಧಿಕ್ಕಾರವಿರಲಿ. ಹೈಕಮಾಂಡ್ ಆರ್ಡರ್‌ ಅನ್ನು ತಲೆಬಾಗಿ, ಕುರ್ಚಿ ಕಳೆದುಕೊಳ್ಳುವ ಭೀತಿಯಲ್ಲಿ ಅಕ್ರಮ ವಲಸಿಗರ ಪರವಾಗಿ, ತರಾತುರಿಯಲ್ಲಿ ಸಭೆಗಳನ್ನು ನಡೆಸಿ ಆದೇಶ ಹೊರಡಿಸಿ, ವಸತಿ ರಹಿತ ಕನ್ನಡಿಗರಿಗೆ ಬಗೆದ ವಿಶ್ವಾಸದ್ರೋಹವಲ್ಲವೇ? ಕರ್ನಾಟಕದಲ್ಲಿ ಸುಮಾರು 30 ಲಕ್ಷಕ್ಕೂ ಹೆಚ್ಚು ವಸತಿರಹಿತ ಬಡ ಕನ್ನಡಿಗರಿಗೆ ಸೂರಿಲ್ಲ. ವಸತಿ ಇಲಾಖೆಯ ಮನೆ ಹಂಚಿಕೆಗಾಗಿ ಅರ್ಜಿ ಸಲ್ಲಿಸಿ ಲಕ್ಷಾಂತರ ಜನರು ಹಗಲು ರಾತ್ರಿ ದುಡಿದ ಹಣವನ್ನು ಮುಂಗಡ ಕಟ್ಟಿ, ವರ್ಷಾನುಗಟ್ಟಲೇ ಇನ್ನೂ ಕಾಯುತ್ತಿದ್ದಾರೆ. ಇಂತಹ ನಿರ್ಗತಿಕರಿಗೆ ಮನೆಗಳನ್ನು ನೀಡುವ ಮನಸ್ಸು ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲವಾಗಿದೆ’ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

ವೋಟ್‌ ಬ್ಯಾಂಕ್‌ಗಾಗಿ ಒಂದು ಸಮುದಾಯದ ಓಲೈಕೆ ಮಾಡುತ್ತಿರುವ ಕಾಂಗ್ರೆಸ್‌ ಪಕ್ಷ, ವಸತಿ ಸಚಿವ ಜಮೀರ್ ಅಹ್ಮದ್ ಕನ್ನಡಿಗರ ತೆರಿಗೆ ಹಣದಲ್ಲಿ ವಲಸಿಗರಿಗೆ 11.20 ಲಕ್ಷ ರೂ ವೆಚ್ಚದ ಮನೆಗಳನ್ನು ನೀಡಿ, ರಾಜ ಮಾರ್ಯಾದೆ ಕೊಡುತ್ತಿರುವುದು ರಾಜ್ಯದ ಜನರಿಗೆ ಮಾಡುತ್ತಿರುವ ವಂಚನೆ ಎಂದು ಜೆಡಿಎಸ್ ಟೀಕಿಸಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *