ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪ*ತ.

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪ*ತ.

KSRTC ಬಸ್–ಲಾರಿ ಮುಖಾಮುಖಿ ಡಿ*.

ಬಾಗಲಕೋಟೆ : ಕೆಎಸ್​​ಆರ್ಟಿಸಿ ಬಸ್​ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್​​ ಚಾಲಕನ ಕಾಲು ತುಂಡಾಗಿರುವ ಜೊತೆಗೆ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಲೋಕಾಪುರ ಹೊರವಲಯದಲ್ಲಿ ನಡೆದಿದೆ. ಬೆಳಗಾವಿ-ರಾಯಚೂರು ರಾಜ್ಯ ಹೆದ್ದಾರಿಯಲ್ಲಿ ನಡೆದಿರುವ ಈ ಅಪಘಾತದಲ್ಲಿ ಗಾಯಗೊಂಡವರನ್ನು ಲೋಕಾಪೂರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಡಿಕ್ಕಿಯ ರಭಸಕ್ಕೆ ಬಸ್​​ ಮತ್ತು ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಲೋಕಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *