ಕರ್ನಾಟಕ ಹವಾಮಾನ ಅಪ್‌ಡೇಟ್
ಬೆಂಗಳೂರು : ರಾಜ್ಯದಲ್ಲಿ ಚಳಿಗಾಲದ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹಲವೆಡೆ ಮಂಜು ಹಾಗೂ ಒಣ ಹವೆಯ ವಾತಾವರಣ ಜನಜೀವನದ ಮೇಲೆ ಪ್ರಭಾವ ಬೀರುತ್ತಿದೆ. ಕಳೆದ ಕೆಲ ದಿನಗಳಿಂದ ಕೆಲವೆಡೆ ತುಂತುರು ಮಳೆಯಾದರೂ, ರಾಜ್ಯದ ಬಹುತೇಕ ಭಾಗಗಳಲ್ಲಿ ಒಣ ಹವೆಯೇ ಮುಂದುವರಿದಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ, ನಿನ್ನೆಯಂತೆಯೇ ಇಂದೂ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಎಲ್ಲೆಲ್ಲಿ ಒಣಹವೆ?
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮಳೆಯ ಲಕ್ಷಣಗಳಿಲ್ಲದೆ ಒಣ ಹವೆಯ ವಾತಾವರಣವಿರಲಿದೆ.
ಇದೇ ವೇಳೆ ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಒಣ ಹವೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಕಳೆದ ಹಲವು ದಿನಗಳಿಂದ ಕಾಣಿಸಿಕೊಂಡಿರುವ ಒಣ ಹವೆಯ ವಾತಾವರಣ ಇಂದು ಸಹ ಮುಂದುವರಿಯಲಿದೆ.
ರಾಜಧಾನಿಯಲ್ಲಿ ಚಳಿ
ರಾಜಧಾನಿ ಬೆಂಗಳೂರಿನಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದ್ದು, ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಕಂಡುಬರುತ್ತಿದೆ. ಇಂದು ನಗರದ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಬೆಚ್ಚಗಿನ ಉಡುಪು ಧರಿಸುವುದು ಹಾಗೂ ಬಿಸಿ ಆಹಾರ ಸೇವಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.
For More Updates Join our WhatsApp Group :




