‘Dhurandhar’ಟಿಕೆಟ್ ಬೆಲೆ ಇಳಿಕೆ.

‘ಧುರಂಧರ್’ ಟಿಕೆಟ್ ಬೆಲೆ ಇಳಿಕೆ.

ಪ್ರೇಕ್ಷಕರಿಗೆ ಸಿಹಿ ಸುದ್ದಿ.

ರಿಯಲ್ ಘಟನೆಯನ್ನು ಆಧರಿಸಿ ತಯಾರಾದ ‘ಧುರಂಧರ್’ ಸಿನಿಮಾ ಬಿಡುಗಡೆ ಆಗಿ ಒಂದು ತಿಂಗಳು ಕಳೆದಿದೆ. ಈಗಲೂ ದೇಶಾದ್ಯಂತ ಈ ಸಿನಿಮಾ ಪ್ರದರ್ಶನ ಕಾಣುತ್ತಿದೆ. ರಣವೀರ್ ಸಿಂಗ್, ಸಾರಾ ಅರ್ಜುನ್, ಅಕ್ಷಯ್ಖನ್ನಾಮುಂತಾದವರು ನಟಿಸಿದ ಈ ಸಿನಿಮಾಗೆ ಬಹುತೇಕ ಪಾಸಿಟಿವ್ ವಿಮರ್ಶೆ ಸಿಕ್ಕಿದೆ. ಇಷ್ಟು ದಿನಗಳ ತನಕವೂ ಈ ಸಿನಿಮಾದ ಟಿಕೆಟ್ ಬೆಲೆ ದುಬಾರಿ ಆಗಿತ್ತು. ಆದರೆ ಈಗ ಟಿಕೆಟ್ ಬೆಲೆ ಕಡಿಮೆ ಮಾಡಲಾಗಿದೆ. ಆಯ್ದ ಕೆಲವು ಚಿತ್ರಮಂದಿರಗಳಲ್ಲಿ ಈಗ ಕೇವಲ 199 ರೂಪಾಯಿಗೆ ‘ಧುರಂಧರ್’ ಸಿನಿಮಾದ ಟಿಕೆಟ್ ಸಿಗಲಿದೆ.

‘ಧುರಂಧರ್’ ಸಿನಿಮಾ ಡಿಸೆಂಬರ್ 5ರಂದು ಬಿಡುಗಡೆ ಆಗಿತ್ತು. ಆಗ ಈ ಸಿನಿಮಾದ ಟಿಕೆಟ್ ಬೆಲೆ ಮುಗಿಲು ಮುಟ್ಟಿತ್ತು. ಸಿನಿಮಾದ ಅವಧಿ 3 ಗಂಟೆ 30 ನಿಮಿಷ ಆದ್ದರಿಂದ ಚಿತ್ರಮಂದಿರಗಳಲ್ಲಿ ಒಂದೇ ದಿನ ಹೆಚ್ಚು ಶೋ ಹಾಕಲು ಕಷ್ಟಪಡಬೇಕಿತ್ತು. ಕಡಿಮೆ ಅವಧಿಯ ಎರಡು ಸಿನಿಮಾಗಳ ಜಾಗವನ್ನು ‘ಧುರಂಧರ್’ ಆಕ್ರಮಿಸಿಕೊಳ್ಳುತ್ತದೆ. ಆ ಕಾರಣದಿಂದಾಗಿ ಸಿನಿಮಾ ಟಿಕೆಟ್ ಬೆಲೆ 250ರಿಂದ ಆರಂಭ ಆಗಿ, ಒಂದೂವರೆ ಸಾವಿರ ರೂಪಾಯಿ ತನಕವೂ ಆಗಿತ್ತು. ಆದರೆ ಈಗ ಟಿಕೆಟ್ ಬೆಲೆ ಕಡಿಮೆ ಮಾಡಲು ನಿರ್ಧರಿಸಲಾಗಿದೆ.

32ನೇ ದಿನ ‘ಧುರಂಧರ್’ ಸಿನಿಮಾದ ಕಲೆಕ್ಷನ್ ಗಣನೀಯವಾಗಿ ತಗ್ಗಿದೆ. ಇಷ್ಟು ದಿನಗಳ ಕಾಲ ಬಹುಕೋಟಿ ರೂಪಾಯಿ ಕಲೆಕ್ಷನ್ ಮಾಡುತ್ತಿದ್ದ ಈ ಸಿನಿಮಾ 32ನೇ ದಿನದಲ್ಲಿ ಕೇವಲ 4.75 ಕೋಟಿ ರೂಪಾಯಿ ಗಳಿಸಿತು. ಮುಂದಿನ ದಿನಗಳಲ್ಲಿ ಕಲೆಕ್ಷನ್ ಇನ್ನಷ್ಟು ತಗ್ಗಲಿದೆ ಎಂಬುದು ಖಚಿತ ಆಗಿದೆ. ಹಾಗಾಗಿ ಟಿಕೆಟ್ ಬೆಲೆ ಕಡಿಮೆ ಮಾಡುವ ಮೂಲಕ ಪ್ರೇಕ್ಷಕರನ್ನು ಸೆಳೆಯಲು ಚಿತ್ರತಂಡ ಮುಂದಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *