“ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಇಲ್ಲ”
ಬೆಂಗಳೂರು : ಕರ್ನಾಟಕದಲ್ಲಿ ಬಿ.ಎಸ್.ಯಡಿಯೂರಪ್ಪ ಇಲ್ಲ ಅಂದರೆ ಬಿಜೆಪಿ ಇಲ್ಲ, ಹೆಚ್.ಡಿ.ದೇವೇಗೌಡರು ಇಲ್ಲ ಅಂದರೆ ಜೆಡಿಎಸ್ ಪಕ್ಷ ಇಲ್ಲ. ಹಾಗೆಯೇ ಸಿದ್ದರಾಮಯ್ಯ ಇಲ್ಲ ಅಂದರೆ ಕಾಂಗ್ರೆಸ್ ಪಕ್ಷ ಇಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ದೀರ್ಘಾವಧಿ ಸಿಎಂ ಆಗಿ ಸಿದ್ದರಾಮಯ್ಯ ದಾಖಲೆ ವಿಚಾರವಾಗಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯಗೆ ಇನ್ನಷ್ಟು ಪುಣ್ಯ, ಶ್ರೇಯಸ್ಸು ಲಭಿಸಲಿ. 2028ರಲ್ಲೂ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂಬ ಆಶಯ ವ್ಯಕ್ತಪಡಿಸಿದ್ದಾರೆ.
For More Updates Join our WhatsApp Group :




