4ವರ್ಷಗಳ ಹೋರಾಟಕ್ಕೆ ಜಯ: ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಸರ್ಕಾರಿ ಉದ್ಯೋಗ.

4ವರ್ಷಗಳ ಹೋರಾಟಕ್ಕೆ ಜಯ: ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಸರ್ಕಾರಿ ಉದ್ಯೋಗ.

ಗಣರಾಜ್ಯೋತ್ಸವದಂದೇ ನೇಮಕಾತಿ ಆದೇಶ ವಿತರಣೆ.

ಚಾಮರಾಜನಗರ:  ಜಿಲ್ಲಾಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ದುರಂತ ಪ್ರಕರಣದ ಸಂತ್ರಸ್ತ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಕೊನೆಗೂ ಸಿಹಿ ಸುದ್ದಿ ಲಭಿಸಿದೆ. ಸಂತ್ರಸ್ತ ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಲು ಸರ್ಕಾರ ಮುಂದಾಗಿದ್ದು, ಗಣರಾಜ್ಯೋವದ ದಿನವೇ ನೇಮಕಾತಿ ಆದೇಶಗಳನ್ನು ನೀಡಲಾಗುವುದು ಎಂದು ಹೇಳಲಾಗಿದೆ.

ಗಣರಾಜ್ಯೋತ್ಸವದಂದೇ ನೇಮಕಾತಿ

2021ರ ಮೇ 3ರಂದು ಆಕ್ಸಿಜನ್ ಕೊರತೆಯಿಂದ ಕೋವಿಡ್ ಸೋಂಕಿತ 36 ರೋಗಿಗಳು ಮೃತಪಟ್ಟಿದ್ದ ಈ ದುರಂತ ಪ್ರಕರಣಕ್ಕೆ ಸಂಬಂಧಿಸಿ, ಸಂತ್ರಸ್ತ ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವದ ದಿನವೇ ನೇಮಕಾತಿ ಆದೇಶಗಳನ್ನು ವಿತರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಚಾಮರಾಜನಗರದಲ್ಲಿ ತಿಳಿಸಿದ್ದಾರೆ.

ಸಂತ್ರಸ್ತರಿಗೆ ನೀಡಿದ ಭರವಸೆ ಈಡೇರಿಸಿದ ಕಾಂಗ್ರೆಸ್

ಸತತ ನಾಲ್ಕು ವರ್ಷಗಳ ಕಾಲ ಸುದೀರ್ಘ ಹೋರಾಟ ನಡೆಸಿದ ಸಂತ್ರಸ್ತ ಕುಟುಂಬಗಳಿಗೆ ಇದೀಗ ನ್ಯಾಯ ಸಿಕ್ಕಂತಾಗಿದೆ. ಕೋವಿಡ್ ಮಹಾಮಾರಿ ಕಾಲದಲ್ಲಿ ನಡೆದ ಈ ದುರ್ಘಟನೆಯು ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಜಿಲ್ಲಾಸ್ಪತ್ರೆಯಲ್ಲಿ ಅಗತ್ಯ ಆಕ್ಸಿಜನ್ ಸರಬರಾಜು ಕೊರತೆಯಿಂದ 36 ರೋಗಿಗಳು ಪ್ರಾಣ ಕಳೆದುಕೊಂಡಿದ್ದರು. ಅಂದು ವಿಪಕ್ಷ ಸ್ಥಾನದಲ್ಲಿದ್ದ ಕಾಂಗ್ರೆಸ್ ಪಕ್ಷವು ಸಂತ್ರಸ್ತ ಕುಟುಂಬಗಳಿಗೆ ನೆರವು ನೀಡುವ ಭರವಸೆ ನೀಡಿತ್ತು. ವಿಶೇಷವಾಗಿ, ಸಂತ್ರಸ್ತರ ಕುಟುಂಬ ಸದಸ್ಯರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಲಾಗಿತ್ತು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆ ವೇಳೆ ಕೂಡ, ಪಕ್ಷ ಅಧಿಕಾರಕ್ಕೆ ಬಂದರೆ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಘೋಷಿಸಿದ್ದರು. ಈಗ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವ ಹಿನ್ನೆಲೆಯಲ್ಲಿ, ನೀಡಿದ್ದ ಭರವಸೆಯನ್ನು ಈಡೇರಿಸುವ ಮೂಲಕ ಸಂತ್ರಸ್ತ ಕುಟುಂಬಗಳಿಗೆ ಆಶಾಕಿರಣ ಮೂಡಿಸಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *