ಮುತ್ತು, ಹವಳ, ನೀಲಮಣಿ ಸೇರಿದಂತೆ ಅಮೂಲ್ಯ ವಸ್ತುಗಳು ದೊರೆತಿವೆ
ಗದಗ : ಅರ್ಧ ಕೆಜಿ ಚಿನ್ನಾಭರಣಗಳ ನಿಧಿ ಸಿಕ್ಕಿ ರಾಜ್ಯವೇ ಕುತೂಹಲದಿಂದ ನೋಡುವಂತಾಗಿರುವ ಗದಗದ ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು ಪತ್ತೆಯಾಗಿವೆ. ಗ್ರಾಮದ ಬಸಪ್ಪ ಬಡಿಗೇರ ಎಂಬವರಿಗೆ ಮುತ್ತು, ಹವಳ, ನೀಲಮಣಿ, ಸ್ಫಟಿಕ, ಬಿಳಿ ಹವಳ, ಕರಿಪುಕ್ಕಾ ಸೇರಿದಂತೆ ಹಲವು ವಸ್ತುಗಳುಳ್ಳ ನಿಧಿ ದೊರೆತಿದೆ. ಬಸಪ್ಪ ಬಡಿಗೇರ ಗ್ರಾಮದಲ್ಲಿ ಹಲವು ವರ್ಷಗಳಿಂದ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಸಾಮಾನ್ಯವಾಗಿ ಮಳೆ ಬಂದ ನಂತರ ಗ್ರಾಮದಲ್ಲಿ ಶೋಧ ಮಾಡುತ್ತಾರೆ. ಈ ಹಿಂದೆ ಸಾಕಷ್ಟು ಪುರಾತನ ಕಾಲದ ವಸ್ತುಗಳು ಅವರಿಗೆ ಸಿಕ್ಕಿದ್ದವು ಎನ್ನಲಾಗಿದೆ. ಅವುಗಳನ್ನೆಲ್ಲ ಅವರು ಸರ್ಕಾರಕ್ಕೆ ಹಸ್ತಾಂತರ ಮಾಡಿದ್ದರು. ಇದೀಗ, ಲಕ್ಕುಂಡಿಯಲ್ಲಿ ಅಪಾರ ಚಿನ್ನ ಇದೆ ಎನ್ನುವ ನಂಬಿಕೆ ಬೆನ್ನಲ್ಲೇ ಪುರಾತನ ವಸ್ತುಗಳು ಪತ್ತೆಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ.
For More Updates Join our WhatsApp Group :




