ರಾಮನಗರದಲ್ಲಿ ಶಾಕ್ ನೀಡಿದ ಘಟನೆ,ಪ್ರೀತಿ ಹೆಸರಲ್ಲಿ ವಂಚನೆ ಆರೋಪ.

ರಾಮನಗರದಲ್ಲಿ ಶಾಕ್ ನೀಡಿದ ಘಟನೆ,ಪ್ರೀತಿ ಹೆಸರಲ್ಲಿ ವಂಚನೆ ಆರೋಪ.

ಪೊಲೀಸ್ ಠಾಣೆ ಬಳಿಯೇ ಆತ್ಮಹ*ಗೆ ಯತ್ನಿಸಿದ ಯುವತಿ.

ರಾಮನಗರ: ರಾಮನಗರದಲ್ಲಿ ಪ್ರೇಮ ವೈಫಲ್ಯದಿಂದ ಮನನೊಂದು ಯುವತಿಯೊಬ್ಬಳು ಡೆತ್ ನೋಟ್ ಬರೆದು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ರಾಮನಗರ ಮಹಿಳಾ ಪೊಲೀಸ್ ಠಾಣೆ ಸಮೀಪವೇ ಈ ಘಟನೆ ನಡೆದಿದ್ದು, ಸಮಯಕ್ಕೆ ಸರಿಯಾಗಿ ಗಮನಿಸಿದ ಪೊಲೀಸರು ಯುವತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಯುವತಿ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲ್ಲೂಕಿನ ಗಟ್ಟಿಗುಂದ ಗ್ರಾಮದ ನಿವಾಸಿಯಾಗಿದ್ದಾರೆ. ಆಕೆ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ಒಂದೂವರೆ ವರ್ಷಗಳಿಂದ ಕನಕಪುರ ತಾಲ್ಲೂಕಿನ ತೆರಿಗೆದೊಡ್ಡಿ ಗ್ರಾಮದ ಅರುಣ್ ನಾಯ್ಕ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದರು.

ಪ್ರೀತಿಯ ಹೆಸರಿನಲ್ಲಿ ಅರುಣ್ ನಾಯ್ಕ್ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಇದೀಗ ವಿವಾಹವಾಗಲು ನಿರಾಕರಿಸುತ್ತಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ಕಳೆದ ಎರಡು ತಿಂಗಳಿಂದ ಇಬ್ಬರ ನಡುವೆ ರಾಜಿ ಸಂಧಾನಕ್ಕೂ ಪ್ರಯತ್ನ ನಡೆದಿದ್ದರೂ, ಪ್ರೇಮಿ ಸ್ಪಂದಿಸದ ಹಿನ್ನೆಲೆಯಲ್ಲಿ ಯುವತಿ ತೀವ್ರವಾಗಿ ಮನನೊಂದಿದ್ದಾರೆ ಎನ್ನಲಾಗಿದೆ.

ಇದೇ ಕಾರಣದಿಂದ ಬೆಂಗಳೂರಿನಿಂದ ರಾಮನಗರಕ್ಕೆ ಬಂದ ಯುವತಿ ಡೆತ್ ನೋಟ್ ಬರೆದು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥಗೊಂಡ ಅವರನ್ನು ಪೊಲೀಸರು ತಕ್ಷಣ ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಚಿಕಿತ್ಸೆ ಮುಂದುವರಿದಿದೆ.

ಕುಡಿಯುವ ನೀರು ಕೇಳುವ ನೆಪದಲ್ಲಿ ಸರಗಳ್ಳತನ, ಮೂವರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕುಡಿಯುವ ನೀರು ಕೇಳುವ ನೆಪದಲ್ಲಿ ಸರಗಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು 59 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರು ಎರಡು ಸರಗಳ್ಳತನ ಪ್ರಕರಣಗಳಲ್ಲಿ ಶಾಮೀಲಾಗಿದ್ದು ತನಿಖೆಯಿಂದ ಬೆಳಕಿಗೆ ಬಂದಿವೆ. ಮನೆಗಳಿಗೆ ನೀರು ಕೇಳುವ ನೆಪದಲ್ಲಿ ಪ್ರವೇಶಿಸಿ, ಅವಕಾಶ ಕಂಡು ಚಿನ್ನಾಭರಣಗಳನ್ನು ಕಳ್ಳತನ ಮಾಡುತ್ತಿದ್ದುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *