ಶಿಡ್ಲಘಟ್ಟ ತಹಶೀಲ್ದಾರ್ಗೆ ನಿಂದನೆ ನೀಡಿದ ಆರೋಪ.
ಚಿಕ್ಕಬಳ್ಳಾಪುರ: ಶಿಡ್ಲಘಟ್ಟನಗರಸಭೆಪೌರಾಯುಕ್ತೆಗೆ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಇಂತಹುದ್ದೇ ಮತ್ತೊಂದು ಆರೋಪ ಕೇಳಿಬಂದಿದೆ. ಶಿಡ್ಲಘಟ್ಟ ತಹಶೀಲ್ದಾರ್ ಗಗನಸಿಂಧು ಅವರಿಗೂ ಏಕವಚನದಲ್ಲಿ ನಿಂದಿಸಿದ್ದ ಎನ್ನಲಾಗಿದ್ದು, ಆದರೆ ತಾನು ಆಡಿಯೋ ರೆಕಾರ್ಡ್ ಮಾಡಿಕೊಂಡಿಲ್ಲ ಎಂದವರು ತಿಳಿಸಿದ್ದಾರೆ. ಈ ಬಗ್ಗೆ ನಗರಸಭೆ ಆಯುಕ್ತೆ ಅಮೃತಾ, ಸ್ಥಳೀಯ ಶಾಸಕ ಬಿ.ಎನ್. ರವಿಕುಮಾರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ಬಳಿ ಅವರು ಅಳಲು ತೋಡಿಕೊಂಡಿದ್ದಾರೆ.
ಆರೋಪಿಗಾಗಿ 3 ತಂಡಗಳಿಂದ ಹುಡುಕಾಟ
ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ವಿಚಾರವಾಗಿ ತಲೆಮರೆಸಿಕೊಂಡಿರುವ ರಾಜೀವ್ಗೌಡಗೆ 3 ತಂಡಗಳಿಂದ ಹುಡುಕಾಟ ನಡೆಸಲಾಗುತ್ತಿದೆ. ಶಿಡ್ಲಘಟ್ಟ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಆನಂದಕುಮಾರ್, ಚಿಂತಾಮಣಿ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಶಿವರಾಜ್ ಮತ್ತು ಸೈಬರ್ ಪೊಲೀಸ್ ಠಾಣೆ ಪಿಐ ಸೂರ್ಯಪ್ರಕಾಶ್ ನೇತೃತ್ವದಲ್ಲಿ ಶೋಧ ನಡೆಯುತ್ತಿದೆ. ಬಂಧನ ಭೀತಿಯಿಂದ ನಿನ್ನೆ ರಾತ್ರಿ ರಾಜೀವ್ ಗೌಡ ಪರಾರಿಯಾಗಿದ್ದು, ಆತನ 2 ಮೊಬೈಲ್ಗಳು ಕೂಡ ಸ್ವಿಚ್ಆಫ್ ಆಗಿವೆ. ಹೀಗಾಗಿ ಬೆಂಗಳೂರಿನ ಇಂದಿರಾನಗರದಲ್ಲಿ 1 ತಂಡ, ಸಂಜಯ್ ನಗರದಲ್ಲಿ 1 ತಂಡ ಮತ್ತು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಒಂದು ತಂಡದಿಂದ ಆರೋಪಿಗೆ ಹುಡುಕಾಟ ನಡೆಯುತ್ತಿದೆ. ಮತ್ತೊಂದೆಡೆ ರಾಜೀವ್ ಗೌಡನನ್ನು ಬಂಧಿಸದಿದ್ರೆ ಶಿಡ್ಲಘಟ್ಟ ಬಂದ್ ಮಾಡುವುದಾಗಿ ಎನ್ಡಿಎ ಮುಖಂಡರು ಪೊಲೀಸರಿಗೆ ಎಚ್ಚರಿಕೆ ಕೂಡ ನೀಡಿರುವ ಕಾರಣ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ.
For More Updates Join our WhatsApp Group :




