ದಾನಜ್ಜಿ ಹ*: ಅಣ್ಣನ ಮಕ್ಕಳೇ ಆಸ್ತಿಗಾಗಿ ಕೊ*.

ದಾನಜ್ಜಿ ಹ*: ಅಣ್ಣನ ಮಕ್ಕಳೇ ಕುಡಿಯದ ನೀಚತನ.

16 ಲಕ್ಷ ಬೆಳ್ಳಿ ಬಾಗಿಲು ಮಾಡಿದ್ದ ದಾನಜ್ಜಿಯ ಕೊ* ಆಸ್ತಿಗಾಗಿ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಜಗದಾಳ ಗ್ರಾಮದಲ್ಲಿ 80 ವರ್ಷದ ವೃದ್ಧೆ ದಾನಜ್ಜಿ ಅಲಿಯಾಸ್ ಚಂದ್ರವ್ವ ನೀಲಗಿ ಅವರನ್ನು ಅಣ್ಣನ ಮಕ್ಕಳೇ ಆಸ್ತಿಗಾಗಿ ಹತ್ಯೆ ಮಾಡಿದ್ದಾರೆ. 11 ಎಕರೆ ಆಸ್ತಿಗಾಗಿ ಈ ಅಮಾನವೀಯ ಕೃತ್ಯ ಎಸಗಲಾಗಿದೆ ಎಂಬುದು ತಿಳಿದುಬಂದಿದೆ. ಬಾಗಲಕೋಟೆ ಜಿಲ್ಲೆ ತೇರದಾಳ ಮತ್ತು ರಬಕವಿಬನಹಟ್ಟಿ ಭಾಗದಲ್ಲಿ ದಾನಜ್ಜಿ ಎಂದೇ ಹೆಸರಾಗಿದ್ದ ಚಂದ್ರವ್ವ ನೀಲಗಿ ಅವರ ಕೊಲೆ ಸ್ಥಳೀರನ್ನು ಆಘಾತಕ್ಕೀಡು ಮಾಡಿದೆ.

ತರಕಾರಿ ಮಾರಟ ಮಾಡಿ ಜೀವನ, ದಾನದಿಂದಲೇ ಪ್ರಸಿದ್ಧಿ

ದಾನಜ್ಜಿ ಅವರು ಜೀವನದುದ್ದಕ್ಕೂ ತರಕಾರಿ ಮಾರಾಟ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಕಳೆದ 60 ವರ್ಷಗಳಿಂದ ತೇರದಾಳದ ಪ್ರಭುಲಿಂಗೇಶ್ವರ ದೇವಸ್ಥಾನದ ಬಳಿ ತರಕಾರಿ ವ್ಯಾಪಾರ ಮಾಡುತ್ತಿದ್ದ ಅವರು, ಕೂಡಿಟ್ಟ ಹಣದಿಂದ ಅನೇಕ ದಾನ ಕಾರ್ಯಗಳನ್ನು ಮಾಡಿದ್ದರು. ವಿಶೇಷವಾಗಿ, 2022ರಲ್ಲಿ ಪ್ರಭುಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಗೆ 20 ಕೆಜಿ ತೂಕದ, 16 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ಬಾಗಿಲನ್ನು ದಾನ ಮಾಡಿದ್ದರು. ಇದಲ್ಲದೆ, ದೇವಸ್ಥಾನದಲ್ಲಿ 3 ಲಕ್ಷ ರೂಪಾಯಿ ವೆಚ್ಚದಲ್ಲಿ ಕೊಠಡಿಯೊಂದನ್ನೂ ನಿರ್ಮಿಸಿಕೊಟ್ಟಿದ್ದರು. ಅವರ ಈ ದಾನ-ಧರ್ಮಗಳ ಗುಣದಿಂದಾಗಿಯೇ ಅವರಿಗೆ ದಾನಜ್ಜಿ ಎಂಬ ಅನ್ವರ್ಥನಾಮ ಬಂದಿತ್ತು.

ಆಸ್ತಿಗಾಗಿ ನೀಚತನ ಪ್ರದರ್ಶಿಸಿದ ದಾನಜ್ಜಿಯ ಅಣ್ಣನ ಮಕ್ಕಳು

ಇಂತಹ ದಾನಕ್ಕೆ ಹೆಸರಾಗಿದ್ದ ವೃದ್ಧೆಯ ಕೊಲೆಗೆ ಆಸ್ತಿ ವಿವಾದವೇ ಕಾರಣವಾಗಿದೆ. ದಾನಜ್ಜಿ ಮತ್ತು ಅವರ ಅಣ್ಣನ ಮಕ್ಕಳ ನಡುವೆ 11 ಎಕರೆ ಆಸ್ತಿಯ ವಿಚಾರವಾಗಿ ಭಿನ್ನಾಭಿಪ್ರಾಯಗಳಿದ್ದವು. ಜನವರಿ 13ರಂದು, ಸರ್ವೆ ಅಧಿಕಾರಿಗಳು ದಾನಜ್ಜಿ ಅವರ ಹೊಲದ ಭೂಮಿಯ ಸರ್ವೆಗಾಗಿ ಬಂದಿದ್ದ ಸಂದರ್ಭದಲ್ಲಿ, ಅಜ್ಜಿ ಘಟಪ್ರಭಾ ಕಾಲುವೆಯ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅವರನ್ನು ಕಾಲುವೆಗೆ ತಳ್ಳಿ ಕೊಲೆ ಮಾಡಲು ಪ್ರಯತ್ನಿಸಲಾಗಿತ್ತು. ನಂತರ, ಆಕೆಯನ್ನು ಉಳಿಸುವ ರೀತಿಯಲ್ಲಿ ನಾಟಕವನ್ನೂ ಮಾಡಲಾಗಿತ್ತು. ಆಕೆಯನ್ನು ಆಸ್ಪತ್ರೆಗೆ ಸಾಗಿಸಲು ಹೈಡ್ರಾಮಾ ನಡೆಸಲಾಗಿತ್ತು. ಬಳಿಕ ಆರೋಪಿಗಳು ವೃದ್ಧೆಯನ್ನು ಕಾಡಯ್ಯ ಬನಹಟ್ಟಿ ಆಸ್ಪತ್ರೆಗೆ ಕರೆ ತಂದಿದ್ದರು. ಅಲ್ಲಿಂದ ತಾವೇ ಗೋಕಾಕ ಆಸ್ಪತ್ರೆಗೆ ಕಡೆಗೆ ಕರೆಕೊಂಡು ಹೋಗುತ್ತೇವೆಂದು ಕರೆದೊಯ್ದಿದ್ದ ಆರೋಪಿಗಳು ಕೊಲೆ ಮಾಡಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *