ಪ್ರೀತಿಯ ವಿರಸಕ್ಕೆ ಪ್ರಿಯತಮೆಯ ಪ್ರಾಣ ತೆಗೆದ ಪ್ರಿಯಕರ.
ಕೋಲಾರ: ಪ್ರಿಯಕರನಿಂದ ಪ್ರಿಯತಮೆಯ ಬರ್ಬರ ಹತ್ಯೆ ನಡೆದಿರುವಂತಹ ಘಟನೆ ಕೋಲಾರ ಹೊರವಲಯದ ಬಂಗಾರಪೇಟೆ ರಸ್ತೆಯಲ್ಲಿ ನಡೆದಿದೆ. ಚಾಕುವಿನಿಂದ ಇರಿದು ಸುಜಾತಾ(27)ರನ್ನು ಚಿರಂಜೀವಿ ಕೊಲೆಗೈದಿದ್ದಾನೆ. ಕಳೆದ ಕೆಲವು ದಿನಗಳಿಂದ ಇಬ್ಬರ ಪ್ರೀತಿಯಲ್ಲಿ ವಿರಸ ಉಂಟಾಗಿದ್ದು, ಅದುವೇ ಕೊಲೆಗೆ ಕಾರಣ ಎನ್ನಲಾಗುತ್ತಿದೆ. ಸದ್ಯ ಸ್ಥಳೀಯರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಡೆದದ್ದೇನು?
ಕೊಲೆಯಾದ ಸುಜಾತಾ ಬಂಗಾರಪೇಟೆಯ ಮಾರುತಿ ನಗರದ ನಿವಾಸಿ. ಕಳೆದ ಮೂರು ತಿಂಗಳಿಂನಿಂದ ಬೆಲ್ರೈಸ್ ಕಂಪನಿಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಆರೋಪಿ ಚಿರಂಜೀವಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಸ್ತ್ರೀ ಸಂಘಗಳ ಮುಖಾಂತರ ಸಾಲ ನೀಡಿ ಹಣ ವಸೂಲಿ ಮಾಡುತ್ತಿದ್ದ, ಈ ವೇಳೆ ಪರಿಚಯವಾಗಿತ್ತು.
ಅಳಲು ತೊಡಿಕೊಂಡ ತಂದೆ
ಈ ಬಗ್ಗೆ ಸುಜಾತಾ ತಂದೆ ಕೃಷ್ಣಮೂರ್ತಿ ಪ್ರತಿಕ್ರಿಯಿಸಿದ್ದು, ಈ ಹಿಂದೆಯೂ ಹಣಕಾಸು ವಿಚಾರಕ್ಕೆ ಸುಜಾತಾ ಮೇಲೆ ಚಿರಂಜೀವಿ ಹಲ್ಲೆ ಮಾಡಿದ್ದ. ಈ ಕುರಿತು ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕ್ರಮಕೈಗೊಳ್ಳದೇ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದರು. ಈಗ ನನ್ನ ಮಗಳ ಕೊಲೆ ಮಾಡಿಬಿಟ್ಟ. ಆಗಲೇ ಸರಿಯಾದ ಕ್ರಮಕೈಗೊಂಡಿದ್ದರೆ ಇಂದು ನನ್ನ ಮಗಳು ಬದುಕಿರುತ್ತಿದ್ದಳು ಎಂದು ಕೃಷ್ಣಮೂರ್ತಿ ಅಳಲು ತೊಡಿಕೊಂಡಿದ್ದಾರೆ.
ಇನ್ನು ಸ್ಥಳಕ್ಕೆ ಕೋಲಾರ ಎಸ್ಪಿ ಕನ್ನಿಕಾ ಸುಕ್ರಿವಾಲ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸೋಕೋ ತಂಡ ಶವವನ್ನು ಕೋಲಾರ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ಆರೋಪಿಗೆ ಸ್ಥಳೀಯರು ಥಳಿತ ಹಿನ್ನೆಲೆ ಆತನಿಗೂ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಅಪ್ರಾಪ್ತ ಬಾಲಕನ ಕೊಲೆ
ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಅಪ್ರಾಪ್ತ ಬಾಲಕನ ಕೊಲೆ ಮಾಡಿರುವಂತಹ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ನಿನ್ನೆ ಸಂಜೆ ನಡೆದಿದೆ. ಮೂವರು ಅಪ್ರಾಪ್ತರಿಂದ ನಿಂಗರಾಜ್ ಅವಾರಿ(16) ಕೊಲೆ. ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
For More Updates Join our WhatsApp Group :



