AQI 171: ಆರೋಗ್ಯದ ಬಗ್ಗೆ ತಜ್ಞರ ಎಚ್ಚರಿಕೆ
ಬೆಂಗಳೂರು : ಬೆಂಗಳೂರಿನ ಗಾಳಿಯ ಗುಣಮಟ್ಟ 171 ಇದ್ದು, ಏರ್ ಕ್ವಾಲಿಟಿ ಅನಾರೋಗ್ಯಕಾರಿ ಹಂತದಲ್ಲೇ ಇದೆ. ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ ಹಲವು ದಿನಗಳಿಂದ ಏರು ಪೇರಾಗುತ್ತಲೇ ಇದೆ. ಒಮ್ಮೊಮ್ಮೆ 200ರ ಗಡಿ ದಾಟುವ AQI, ನಗರವಾಸಿಗಳಲ್ಲಿ ಆತಂಕ ಸೃಷ್ಟಿಸುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ಅಪಾಯಕಾರಿಯಾಗಿರುವ ಸೂಕ್ಷ್ಮ ಕಣಗಳು
PM2.5 ಮಾನವನ ಕೂದಲಿನ ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಬೆಂಗಳೂರಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ (WHO) ಮಿತಿಗಿಂತ 5 ಪಟ್ಟು ಹೆಚ್ಚಿರುವ ಸೂಕ್ಷ್ಮ ಕಣಗಳ ಪ್ರಮಾಣ ಆತಂಕಕಾರಿಯಾಗಿದೆ.ಇಂದಿನ ಅಂಕಿಅಂಶಗಳ ಪ್ರಕಾರ PM2.5 ಪ್ರಮಾಣ 84 ಆಗಿದ್ದು, PM10 109ಕ್ಕೆ ಏರಿಕೆಯಾಗಿದೆ. ಈ ಕಣಗಳು ನೇರವಾಗಿ ಉಸಿರಾಟ ವ್ಯವಸ್ಥೆಗೆ ಹೊಡೆತ ನೀಡುತ್ತವೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.
PM10 ಎನ್ನುವುದು ನಮಗಿಂತ 7 ಪಟ್ಟು ತೆಳುವಾದ ಧೂಳಿನ ಕಣಗಳಾದರೆ, PM2.5 ಮಾನವನ ಕೂದಲಿನ ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಆರೋಗ್ಯ ತಜ್ಞರು ಮಕ್ಕಳು, ವೃದ್ಧರು ಹಾಗೂ ಶ್ವಾಸಕೋಶ ಸಮಸ್ಯೆ ಇರುವವರು ಹೊರಗೆ ಹೋಗುವಾಗ ಎಚ್ಚರಿಕೆ ವಹಿಸಲು ಸಲಹೆ ನೀಡಿದ್ದಾರೆ. ಮಾಸ್ಕ್ ಬಳಕೆ, ವಾಹನ ಬಳಕೆಯನ್ನು ಕಡಿಮೆ ಮಾಡುವುದು ಮತ್ತು ಹಸಿರು ಪ್ರದೇಶಗಳನ್ನು ಹೆಚ್ಚಿಸುವುದು ಈಗ ನಗರಕ್ಕೆ ಅನಿವಾರ್ಯವಾಗಿದೆ.
ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)
- ಬೆಂಗಳೂರು –171
- ಮಂಗಳೂರು-167
- ಮೈಸೂರು –102
- ಬೆಳಗಾವಿ – 104
- ಕಲಬುರ್ಗಿ-69
- ಶಿವಮೊಗ್ಗ – 167
- ಬಳ್ಳಾರಿ – 170
- ಹುಬ್ಬಳ್ಳಿ- 72
- ಉಡುಪಿ –144
- ವಿಜಯಪುರ –62
ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?
- ಉತ್ತಮ- 0-50
- ಮಧ್ಯಮ – 50-100
- ಕಳಪೆ – 100-150
- ಅನಾರೋಗ್ಯಕರ – 150-200
- ಗಂಭೀರ – 200 – 300
- ಅಪಾಯಕಾರಿ – 300 -500+
For More Updates Join our WhatsApp Group :




