ಉಡುಪಿ ಧ್ವಜ ವಿವಾದ: BJP-Congress ನಡುವೆ ರಾಜಕೀಯ ಜಟಾಪಟಿ.

ಉಡುಪಿ ಧ್ವಜ ವಿವಾದ: BJP-Congress ನಡುವೆ ರಾಜಕೀಯ ಜಟಾಪಟಿ.

ಶೀರೂರು ಪರ್ಯಾಯ ಮಹೋತ್ಸವ ಮೆರವಣಿಗೆಯಲ್ಲಿ ಡಿಸಿಯವರು ತೋರಿಸಿದ ಕೇಸರಿ ಧ್ವಜ: ಕಾಂಗ್ರೆಸ್ ಆಕ್ಷೇಪ

ಉಡುಪಿ: ಶೀರೂರುಮಠದ ಪರ್ಯಾಯ ಮಹೋತ್ಸವ ಹಿನ್ನೆಲೆ ಉಡುಪಿಯ ಜೋಡುಕಟ್ಟೆಯಿಂದ ಆರಂಭವಾದ ಮೆರವಣಿಗೆಗೆ ಕೇಸರಿ ಧ್ವಜ ತೋರಿಸಿ ಜಿಲ್ಲಾಧಿಕಾರಿಗಳಿಂದ ಚಾಲನೆ ವಿಚಾರವೀಗ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಬಿಜೆಪಿ ಶಾಸಕ ಯಶಪಾಲ್ ಸುವರ್ಣ ನೀಡಿದ್ದ ಕೇಸರಿ ಧ್ವಜವನ್ನು ಪಡೆದಿದ್ದ ಡಿಸಿ ಸ್ವರೂಪ ಟಿ. ಕೆ. ಅದನ್ನು ತೋರಿಸುವ ಮೂಲಕ ಪರ್ಯಾಯ ಮೆರವಣಿಗೆ ಚಾಲನೆ ನೀಡಿದ್ದರು. ಇದೇ ವಿಚಾರಕ್ಕೀಗ ಉಡುಪಿ ಜಿಲ್ಲಾ ಕಾಂಗ್ರೆಸ್​​ ಸಮಿತಿ ಆಕ್ಷೇಪ ತೆಗೆದಿದೆ. ಮುಂದುವರಿದು ಮುಖ್ಯಮಂತ್ರಿಗಳಿಗೆ ದೂರು ನೀಡಿರೋದು ರಾಜಕೀಯ ವಾಗ್ಯುದ್ಧಕ್ಕೆ ಕಾರಣವಾಗಿದೆ.

ಜ. 18ರ ಮುಂಜಾನೆ ಸುಮಾರು 3 ಗಂಟೆಗೆ ಉಡುಪಿ ನಗರದ ಜೋಡುಕಟ್ಟೆಯಿಂದ ಶ್ರೀ ಕೃಷ್ಣ ಮಠದವರೆಗೆ ಪರ್ಯಾಯ ಮೆರವಣಿಗೆ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಅವರು ಭಾಗವಹಿಸಿದ್ದರು. ಪರ್ಯಾಯ ಮೆರವಣಿಗೆ ಆರಂಭಕ್ಕೂ ಮೊದಲು ಉಡುಪಿ ಶಾಸಕರು RSS ಧ್ವಜವನ್ನು ಜಿಲ್ಲಾಧಿಕಾರಿಯವರ ಕೈಗೆ ಹಸ್ತಾಂತರಿಸಿದ್ದು, ಅದೇ. ಈ ಧ್ವಜವನ್ನು ಕೈಯಲ್ಲಿ ಹಿಡಿದು ಮೇಲಕ್ಕೆ ಎತ್ತಿ ಸಾರ್ವಜನಿಕವಾಗಿ ಡಿಸಿ ಪ್ರದರ್ಶಿಸಿದ್ದಾರೆ. ಜಿಲ್ಲಾಧಿಕಾರಿಯವರ ಈ ನಡೆ ಸರ್ಕಾರಿ ಸೇವಾ ನಿಯಮಗಳಿಗೆ ವಿರುದ್ಧವಾಗಿದೆ. ಹೀಗಾಗಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಸರ್ಕಾರವನ್ನು ​​ ಆಗ್ರಹಿಸಿದೆ.

ಜಿಲ್ಲಾಧಿಕಾರಿಯಿಂದ ಸ್ಪಷ್ಟನೆ

ಮೆರವಣಿಗೆ ಚಾಲನೆಗೆ ಕೇಸರಿ ಧ್ವಜ ತೋರಿಸಿದ ವಿಚಾರದ ಬಗ್ಗೆ ಆಕ್ಷೇಪಗಳು ಕೇಳಿಬಂದ ಹಿನ್ನೆಲೆ ಸ್ವರೂಪ ಅವರು ಸ್ಪಷ್ಟನೆ ನೀಡಿದ್ದಾರೆ. ಪರ್ಯಾಯ ಮಹೋತ್ಸವದ ವೇಳೆ ನಗರಸಭೆಯ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಅದನ್ನು ಹೊರತುಪಡಿಸಿ ಯಾವುದೇ ರಾಜಕೀಯ ಪ್ರೇರಿತ ಭಾಗವಹಿಸುವಿಕೆ ಮಾಡಿಲ್ಲ. ಈ ವಿಚಾರವನ್ನು ಸಾರ್ವಜನಿಕರು ಗಮನಿಸಬೇಕು ಎಂದು ವಿನಂತಿಸೋದಾಗಿ ಹೇಳಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *