ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ: ರಾಜೀವ್ ಗೌಡಕ್ಕೆ ಸಸ್ಪೆನ್ಶನ್ ಆತಂಕ.

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ: ರಾಜೀವ್ ಗೌಡಕ್ಕೆ ಸಸ್ಪೆನ್ಶನ್ ಆತಂಕ.

ಕಾಂಗ್ರೆಸ್ ಮುಖಂಡಕ್ಕೆ ಕೆಪಿಸಿಸಿ ಶಾಕ್; ಶಿಸ್ತು ಸಮಿತಿಗೆ ಅಮಾನತು ಶಿಫಾರಸು.

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಜೀವ್ ಗೌಡ ತಲೆಮರೆಸಿಕೊಂಡಿದ್ದು, ಇತ್ತ ಇದನ್ನೇ ಅಸ್ತ್ರ ಮಾಡಿಕೊಂಡು ಬಿಜೆಪಿ ಹಾಗೂ ಜೆಡಿಎಸ್, ರಾಜೀವ್ ಗೌಡ ಕಾಣೆಯಾಗಿದ್ದಾನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಹಂಚಿಕೊಂಡಿದೆ. ಇದು ಆಡಳಿತರೂಢ ಕಾಂಗ್ರೆಸ್​​ಗೆ ಮುಜುಗರವಾಗಿದೆ. ಇದರಿಂದ ಆರೋಪಿ ರಾಜೀವ್​ಗೌಡಗೆ ಕೆಪಿಸಿಸಿ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ರಾಜೀವ್ ಗೌಡನನ್ನು ಪಕ್ಷದಿಂದ ಅಮಾನತು ಮಾಡುವಂತೆ ಕಾರ್ಯಾಧ್ಯಕ್ಷ ಚಂದ್ರಶೇಖರ್ ಅವರು ಕಾಂಗ್ರೆಸ್ ಶಿಸ್ತು ಸಮಿತಿ ಅಧ್ಯಕ್ಷರಿಗೆ ಶಿಫಾರಸು ಮಾಡಿದ್ದಾರೆ.

ಅಮಾನತಿಗ ಶಿಸ್ತು ಸಮಿತಿಗೆ ಶಿಫಾರಸ್ಸು

ರಾಜೀವ್ ಗೌಡ ಅವರ ನಡೆ ಮಾಧ್ಯಮಗಳಲ್ಲಿ ಪ್ರಚಾರಗೊಂಡು ಕಾಂಗ್ರೆಸ್ ಪಕ್ಷಕ್ಕೆ ಮತ್ತು ರಾಜ್ಯ ಮಟ್ಟದ ನಾಯಕರಿಗೆ ತೀವ್ರ ಮುಜುಗರ ಉಂಟುಮಾಡಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಸಿ. ಚಂದ್ರಶೇಖರ್ ಅವರು ಶಿಸ್ತು ಸಮಿತಿಗೆ ಪತ್ರ ಬರೆದಿದ್ದಾರೆ. ‘ಪಕ್ಷದ ಘನತೆಗೆ ಧಕ್ಕೆ ತಂದಿರುವ ರಾಜೀವ್ ಗೌಡ ಅವರನ್ನು ತಕ್ಷಣವೇ ಪಕ್ಷದಿಂದ ಅಮಾನತುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಪತ್ರದಲ್ಲಿ ಸೂಚಿಸಲಾಗಿದೆ.

ನೋಟಿಸ್​​ಗೂ ರಾಜೀವ್ ಗೌಡ ಡೋಂಟ್ ಕೇರ್!

ಬ್ಯಾನರ್ ತೆರವು ಮಾಡಿರುವ ಸಂಬಂಧ ರಾಜೀವ್ ಗೌಡ, ಶಿಡ್ಲಘಟ್ಟ ಮಹಿಳಾ ಪೌರಾಯುಕ್ತೆ ಅಮೃತಾ ಅವರಿಗೆ ಕರೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದರು. ಇದೀಗ ಈ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಹೀಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸೂಚನೆಯ ಮೇರೆಗೆ ಕಳೆದ ಜನವರಿ 15, 2026 ರಂದು ರಾಜೀವ್ ಗೌಡ ಅವರಿಗೆ ವಿವರಣೆ ಕೋರಿ ನೋಟಿಸ್ ಜಾರಿ ಮಾಡಲಾಗಿತ್ತು. ನೋಟಿಸ್ ತಲುಪಿದರೂ ಸಹ ಅವರು ಇದುವರೆಗೂ ಯಾವುದೇ ಲಿಖಿತ ಉತ್ತರ ಅಥವಾ ಸ್ಪಷ್ಟನೆ ನೀಡಿಲ್ಲ. ಇದರಿಂದ ರಾಜೀವ್ ಗೌಡ ಅಮಾನತಿಗೆ ಕಾರ್ಯಾಧ್ಯಕ್ಷ ಚಂದ್ರಶೇಖರ್ ಅವರು ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್​ ಅವರಿಗೆ ಪತ್ರ ಬರೆದಿದ್ದಾರೆ. ಇದರಿಂದ ರಾಜೀವ್ ಗೌಡ ಸಸ್ಪೆಂಡ್ ಆಗುವುದು ಬಹುತೇಕ ಖಚಿತವಾಗಿದ್ದು, ಯಾವುದೇ ಸಂದರ್ಭದಲ್ಲೂ ಸಹ ಆದೇಶ ಹೊರಬೀಳಬಹುದು.

ಇದುವರೆಗೂ ರಾಜೀವ್ ಗೌಡನ ಬಂಧನವಾಗಿಲ್ಲ

ಬ್ಯಾನರ್ ತೆರವು ಮಾಡಿರುವ ಸಂಬಂಧ ರಾಜೀವ್ ಗೌಡ, ಶಿಡ್ಲಘಟ್ಟ ಮಹಿಳಾ ಪೌರಾಯುಕ್ತೆ ಅಮೃತಾ ಅವರಿಗೆ ಕರೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದರು. ಇದರ ಬೆನ್ನಲ್ಲೇ ಅಮೃತಾ ಅವರು ರಾಜೀವ್ ಗೌಡ ವಿರುದ್ಧ ದೂರು ದಾಖಲಿಸಿದ್ದು, ಈ ದೂರಿನ ಮೇರೆಗೆ ಪೊಲೀಸರು ಸಹ ಎಫ್​​ಐಆರ್ ದಾಖಲಿಸಿದ್ದಾರೆ. ಆದ್ರೆ, ಇದುವರೆಗೂ ರಾಜೀವ್ ಗೌಡನನ್ನು ಬಂಧಿಸಲು ಆಗಿಲ್ಲ. ಇನ್ನು ರಾಜೀವ್ ಗೌಡ ಎಲ್ಲಿದ್ದಾನೆ ಎನ್ನುವ ಸುಳಿವು ಸಹ ಸಿಕ್ಕಿಲ್ಲ. ಇನ್ನೊಂದೆಡೆ ಸಚಿವ ಸೂಚನೆ ಹಿನ್ನೆಲೆಯಲ್ಲಿ ಪೊಲೀಸರು ಬೇಕಂತಲೇ ರಾಜೀವ್ ಗೌಡನನ್ನು ಬಂಧಿಸುತ್ತಿಲ್ಲ ಎನ್ನುವ ಆರೋಪ ಕೇಳಿಬಂದಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *