ರಾಜ್ಯ ರಾಜಕಾರಣ ಹೈಡ್ರಾಮಾ.

ರಾಜ್ಯ ರಾಜಕಾರಣ ಹೈಡ್ರಾಮಾ.

ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣಕ್ಕೆ ಅಡ್ಡಿ?

ಬೆಂಗಳೂರು: ಕರ್ನಾಟಕದಲ್ಲಿ ರಾಜ್ಯಪಾಲರು ಮತ್ತು ಸರ್ಕಾರದ ನಡುವಿನ ಶೀತಲ ಸಮರ ಈಗ ಬಹಿರಂಗ ಸಂಘರ್ಷಕ್ಕೆ ತಿರುಗಿದೆ. ಇಂದು ಆರಂಭವಾಗಲಿರುವ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದಲು ರಾಜ್ಯಪಾಲರು ನಿರಾಕರಿಸಿದ್ದಾರೆ. ಭಾಷಣದಲ್ಲಿ ಉಲ್ಲೇಖಿಸಲಾಗಿರುವ 11 ಪ್ಯಾರಾಗಳನ್ನು ತಿದ್ದುಪಡಿ ಮಾಡುವಂತೆ ಅಥವಾ ಕೈಬಿಡುವಂತೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ. ಆದರೆ, ರಾಜ್ಯ ಸರ್ಕಾರವು ರಾಜ್ಯಪಾಲರ ಈ ಷರತ್ತಿಗೆ ನಕಾರ ವ್ಯಕ್ತಪಡಿಸಿದೆ. ಸರ್ಕಾರವು ಬರೆದುಕೊಟ್ಟ ಭಾಷಣವನ್ನೇ ರಾಜ್ಯಪಾಲರು ಓದಬೇಕು ಎಂದು ಪಟ್ಟು ಹಿಡಿದಿದೆ. ಈ ವಿಚಾರವಾಗಿ ಸರ್ಕಾರ ಕಾನೂನು ಹೋರಾಟಕ್ಕೂ ಸಿದ್ಧವಾಗಿದೆ.

ಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ನವದೆಹಲಿಗೆ ತೆರಳಿದ್ದಾರೆ. ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿ ರಾಜ್ಯಪಾಲರಿಗೆ ನಿರ್ದೇಶನ ನೀಡುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಿರುವ ಸಂಭಾವ್ಯ ಅರ್ಜಿಯಲ್ಲಿ ಎರಡು ಪ್ರಮುಖ ಅಂಶಗಳ ಮೇಲೆ ರಾಜ್ಯಪಾಲರಿಗೆ ನಿರ್ದೇಶನ ನೀಡಲು ಸರ್ಕಾರ ಕೋರಲಿದೆ. ಮೊದಲನೆಯದಾಗಿ, ರಾಜ್ಯಪಾಲರು ಸರ್ಕಾರದ ಭಾಷಣವನ್ನು ಸದನದಲ್ಲಿ ಓದಬೇಕು. ಎರಡನೆಯದಾಗಿ, ರಾಜ್ಯಪಾಲರು ತಮ್ಮ ಸಾಂವಿಧಾನಿಕ ಕರ್ತವ್ಯಗಳನ್ನು ಪಾಲಿಸಬೇಕು. ಈ ಕುರಿತು ಅರ್ಜಿ ಸಿದ್ಧಪಡಿಸಲು ಮುಖ್ಯಮಂತ್ರಿಗಳು ಪೊನ್ನಣ್ಣ ಮತ್ತು ಅಡ್ವೊಕೇಟ್ ಜನರಲ್ ಅವರಿಗೆ ಜವಾಬ್ದಾರಿಯನ್ನು ವಹಿಸಿದ್ದಾರೆ.

11 ಅಂಶ ಕೈಬಿಡಲು ಹೇಳಿದ್ದೇಕೆ ರಾಜ್ಯಪಾಲರು?

ಸರ್ಕಾರ ಬರೆದುಕೊಟ್ಟ ಭಾಷಣದಲ್ಲಿ ಮನ್ರೇಗಾ ಕಾಯ್ದೆ ಬದಲಾವಣೆ ಬಗ್ಗೆ ಉಲ್ಲೇಖಿಸಲಾಗಿತ್ತು. ಅದರಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕೆಲ ಅಂಶಗಳಿವೆ ಎಂದಿರುವ ರಾಜ್ಯಪಾಲರು, 11 ಪ್ಯಾರಾಗಳನ್ನು ಕೈಬಿಡಬೇಕೆಂದು ಸಲಹೆ ನೀಡಿದ್ದಾರೆ. ಕೇಂದ್ರ, ರಾಜ್ಯ ಸರ್ಕಾರದ ನಡುವೆ ಸಂಬಂಧದ ಬಗ್ಗೆ ಉಲ್ಲೇಖವಿದೆ. ಮನ್​ರೇಗಾ ಯೋಜನೆ ಮರುಸ್ಥಾಪನೆ, ಅನುದಾನ ತಾರತಮ್ಯ, ಕೇಂದ್ರ ಸರ್ಕಾರ ಕಾರ್ಮಿಕರ ಕೆಲಸ ಕಿತ್ತುಕೊಂಡಿದ್ದು, ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಅನುದಾನ ನೀಡದಿರುವುದು ಸೇರಿದಂತೆ ಕೇಂದ್ರ ವಿರುದ್ಧದ ವಿಚಾರ ಕೈಬಿಡುವಂತೆ ರಾಜ್ಯಪಾಲರಿಂದ ಸಲಹೆ ನೀಡಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *