ರಾಜ್ಯಪಾಲರು ಒಂದೇ ವಾಕ್ಯದಲ್ಲಿ ಮಾತು ಮುಗಿಸಿ, ಸರ್ಕಾರದ ಭಾಷಣ ಓದದೆ ಹೋದರು
ಬೆಂಗಳೂರು: ನರೇಗಾ ಯೋಜನೆ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿರುವುದರ ವಿರುದ್ಧ ಕರ್ನಾಟಕ ಸರ್ಕಾರ ಕರೆದಿರುವ ವಿಶೇಷ ಅಧಿವೇಶನ ಕೂಡ ರಾಜ್ಯಪಾಲರು ಮತ್ತು ಸರ್ಕಾರದ ವಿರುದ್ಧದ ಸಂಘರ್ಷಕ್ಕೆ ಕಾರಣವಾಗಿದೆ. ಅಧಿವೇಶನ ಉದ್ದೇಶಿಸಿ ಮಾತನಾಡಲು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ವಿಧಾನಸಭೆಗೆ ಬರುತ್ತಾರೆಯೇ ಎಂಬ ಅನುಮಾನವಿತ್ತು. ಆದರೆ, ಇದನ್ನು ಹುಸಿ ಮಾಡಿದ ರಾಜ್ಯಪಾಲರು, ಕೇವಲ ಒಂದೆರಡು ವಾಕ್ಯಗಳಲ್ಲಿ ಮಾತನಾಡಿ ಶುಭಾಶಯ ತಿಳಿಸಿ ಸರ್ಕಾರ ಕೊಟ್ಟ ಭಾಷಣದ ಪ್ರತಿ ಓದದೆ ತೆರಳಿದರು. ಇದಕ್ಕೆ ಆಡಳಿತ ಪಕ್ಷದ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ವಿಧಾನಸಭೆ ಹೈಡ್ರಾಮಾಕ್ಕೆ ಸಾಕ್ಷಿಯಾಯಿತು.
For More Updates Join our WhatsApp Group :




