ನಿಯಂತ್ರಣವಿಲ್ಲದ ಗದ್ದಲ, ಬಿಜೆಪಿ–ಕಾಂಗ್ರೆಸ್ ಸದಸ್ಯರ ಮಧ್ಯೆ ಗರಖಾಲಿ
ಬೆಂಗಳೂರು : ಕರ್ನಾಟಕ ವಿಧಾನಸಭೆ ವಿಶೇಷ ಅಧಿವೇಶನದ ಆರಂಭದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಒಂದೇ ವಾಕ್ಯದಲ್ಲಿ ಭಾಷಣ ಮುಗಿಸಿ ನಿರ್ಗಮಿಸುವ ವೇಳೆ ನಡೆದ ಹೈಡ್ರಾಮಾದಲ್ಲಿ ಕಾಂಗ್ರೆಸ್ ಎಂಎಲ್ಸಿ ಬಿಕೆ ಹರಿಪ್ರಸಾದ್ ಬಟ್ಟೆ ಹರಿದಿದೆ. ಬಿಜೆಪಿಯವರೇ ಬಟ್ಟೆ ಎಳೆದು ಹರಿದಿದ್ದಾರೆ ಎಂದು ಹರಿಪ್ರಸಾದ್ ಆರೋಪಿಸಿದ್ದಾರೆ. ರಾಜ್ಯಪಾಲರು ವಿಧಾನಸಭೆಯಿಂದ ಹೊರಗೆ ತೆರಳುತ್ತಿದ್ದ ವೇಳೆ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್, ಐವಾನ್ ಡಿಸೋಜಾ, ಶಾಸಕರಾದ ಶರತ್ ಬಚ್ಚೇಗೌಡ, ಪ್ರದೀಪ್ ಈಶ್ವರ್, ಹೆಚ್.ಸಿ. ಬಾಲಕೃಷ್ಣ ಘೋಷಣೆ ಕೂಗುತ್ತಿದ್ದರು. ಈ ವೇಳೆ ಬಿ.ಕೆ. ಹರಿಪ್ರಸಾದ್ ಅವರನ್ನು ಮಾರ್ಷಲ್ಗಳು ಅಲುಗಾಡಲು ಸಾಧ್ಯವಾಗದಂತೆ ಪಕ್ಕಕ್ಕೆ ಎಳೆದೊಯ್ದಿದ್ದು ಬಿಟ್ಟಿದ್ದು ವಿಡಿಯೋದಲ್ಲಿ ಕಾಣಿಸಿದೆ. ಇದರಿಂದ ಸಿಟ್ಟಿಗೆದ್ದ ಬಿ.ಕೆ. ಹರಿಪ್ರಸಾದ್ ಮತ್ತು ಹೆಚ್.ಸಿ. ಬಾಲಕೃಷ್ಣ ವಾಪಸ್ ಬಂದು ಮಾರ್ಷಲ್ ಹಿಡಿದು ಎಳೆದು ಆಕ್ರೋಶ ವ್ಯಕ್ತಪಡಿಸಿದ್ದರು. ಈ ವೇಳೆ, ಹರಿಪ್ರಸಾದ್ ಬಟ್ಟೆ ಹರಿದಿದೆ ಎನ್ನಲಾಗಿದೆ.
For More Updates Join our WhatsApp Group :




