ಜ.29ರಂದು ಮುಷ್ಕರಕ್ಕೆ ಅವಕಾಶವಿಲ್ಲ: ‘ನೋ ವರ್ಕ್ ನೋ ಪೇ’ ಎಚ್ಚರಿಕೆ.
ಬೆಂಗಳೂರು: ಕೆಎಸ್ಆರ್ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ನೌಕರರು ಸಮರ ಸಾರಿದ್ದಾರೆ. ವೇತನ ಮತ್ತು ವೇತನ ಪರಿಷ್ಕರಣೆಗೆ ಸಂಬಂಧಿಸಿದ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ನಾಡಿದ್ದು ಅಂದರೆ ಜನವರಿ 29ರಂದು ಬೆಂಗಳೂರು ಚಲೋಗೆ ಕರೆ ನೀಡಿದ್ದಾರೆ. ಆದ್ರೆ, ಇದಕ್ಕೆ ಕೆಎಸ್ಆರ್ಟಿಸಿ ಶಾಕ್ ಕೊಟ್ಟಿದ್ದು, ಸಾರಿಗೆ ನೌಕರರು ಯಾವುದೇ ಮುಷ್ಕರ ಹೂಡುವಂತಿಲ್ಲ. ಮುಷ್ಕರಕ್ಕೆ ಬೆಂಬಲವನ್ನು ಸೂಚಿಸುವಂತಿಲ್ಲ. ಗುರುವಾರ ಡ್ಯೂಟಿಗೆ ಬಂದಿಲ್ಲ ಅಂದರೆ ‘ನೋ ವರ್ಕ್ ನೋ ಪೇ’ ಎಂದು ಕೆಎಸ್ಆರ್ಟಿಸಿ ಎಂಡಿ ಅಕ್ರಂ ಪಾಷ ಆದೇಶ ಹೊರಡಿಸಿದ್ದಾರೆ.
‘ನೋ ವರ್ಕ್ ನೋ ಪೇ’ ಆದೇಶ
ಸಾರಿಗೆ ನೌಕರರು ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಜನವರಿ 29ರಂದು ಬೆಂಗಳೂರು ಚಲೋ ಕೈಗೊಂಡಿದ್ದಾರೆ. ಆದ್ರೆ, ಇದಕ್ಕೆ ಒಂದು ದಿನ ಮೊದಲೇ ಕೆಎಸ್ಆರ್ಟಿಸಿ ಮಹತ್ವದ ಆದೇಶ ಹೊರಡಿಸಿದ್ದು, ಸಾರಿಗೆ ನೌಕರರು ಯಾವುದೇ ಮುಷ್ಕರ ಹೂಡುವಂತಿಲ್ಲ. ಮುಷ್ಕರಕ್ಕೆ ಬೆಂಬಲವನ್ನು ಸೂಚಿಸುವಂತಿಲ್ಲ ಎಂದು ಎಚ್ಚರಿಕೆ ಸಂದೇಶ ರವಾನಿಸಿದೆ. ಒಂದು ವೇಳೆ ಗುರುವಾರ ಡ್ಯೂಟಿಗೆ ಬಂದಿಲ್ಲ ಅಂದರೆ ‘ನೋ ವರ್ಕ್ ನೋ ಪೇ’ ಎನ್ನುವ ಆದೇಶವನ್ನು ಜಾರಿ ಮಾಡಿದೆ.
ಅಧಿಕಾರಿಗಳಿಗೆ ಖಡಕ್ ಸೂಚನೆ
01-01-2020ರಿಂದ 28-02-2023ರ ವರೆಗಿನ 38 ತಿಂಗಳ ವೇತನ ಪರಿಷ್ಕರಣೆಯ ಹಿಂಬಾಕಿ ಹಾಗೂ 01.01.2024 ರಿಂದ ನಾಲ್ಕು ವರ್ಷಗಳ ವೇತನ ಒಪ್ಪಂದಕ್ಕೆ ಆಗ್ರಹಿಸಿ ಜಂಟಿ ಕ್ರಿಯಾ ಸಮಿತಿಯು ಜನವರಿ 29ರ ಗುರುವಾರ ಬೆಂಗಳೂರು ಚಲೋಗೆ ಕರೆ ನೀಡಿದೆ. ಈ ಹಿನ್ನೆಲೆ ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಆಗದಂತೆ ಮುಂಜಾಗ್ರತಾ ಕೈಗೊಳ್ಳುವಂತೆ ಕೆಎಸ್ಆರ್ಟಿಸಿ ಎಂಡಿ ಅಕ್ರಂ ಪಾಷ, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
For More Updates Join our WhatsApp Group :




