ಕಣ್ಣೀರಿಡುತ್ತಾ ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಪುಣೆ : ಮಹಾರಾಷ್ಟ್ರದ ಡಿಸಿಎಂ ಹಾಗೂ ಎನ್ಸಿಪಿ ನಾಯಕ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ನೆರವೇರಿದೆ. ನಿನ್ನೆ ಬಾರಾಮತಿಯಲ್ಲಿ ನಡೆದ ವಿಮಾನ ದುರಂತದಲ್ಲಿ ಅವರು ಮೃತಪಟ್ಟಿದ್ದರು. ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಪುಣೆಯ ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. ಅವರ ಪುತ್ರರಾದ ಪಾರ್ಥ್ ಮತ್ತು ಜೇ ತಮ್ಮ ತಂದೆಯ ಅಂತ್ಯಕ್ರಿಯೆಯ ವಿಧಿ-ವಿಧಾನಗಳನ್ನು ನಡೆಸಿದರು. ಕೇಂದ್ರ ಸಚಿವ ಅಮಿತ್ ಶಾ, ನಿತಿನ್ ಗಡ್ಕರಿ, ಮಹಾರಾಷ್ಟ್ರದ ಸಿಎಂ ದೇವೇಂದ್ರ ಫಡ್ನವೀಸ್ ಸೇರಿದಂತೆ ಹಲವರು ಅಂತಿಮ ನಮನ ಸಲ್ಲಿಸಿದರು.
For More Updates Join our WhatsApp Group :




