ರಾಯಚೂರುದಲ್ಲಿ ಕುಟುಂಬ ಕಲಹದ ಹಿಂದಿನ ಅಸಲಿ ಕಾರಣ ಬಹಿರಂಗ.
ರಾಯಚೂರು: ಜಿಲ್ಲೆಯ ಸಿರವಾರ ತಾಲ್ಲೂಕಿನ ಚಿಕ್ಕ ಹಣಗಿ ಗ್ರಾಮದಲ್ಲಿ ಗರ್ಭಿಣಿ ಸೊಸೆಯನ್ನು ಕತ್ತು ಸೀಳಿ ಕೊಲೆಗೈದ ಪ್ರಕರಣದಲ್ಲಿ ಬೆಚ್ಚಿಬೀಳಿಸುವ ಘಟನೆ ನಿನ್ನೆ (ಜನವರಿ 29) ಬೆಳಕಿಗೆ ಬಂದಿತ್ತು. ಈ ಪ್ರಕರಣಕ್ಕೀಗ ಹೊಸ ತಿರುವು ಸಿಕ್ಕಿದೆ. ಆರಂಭದಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಮಾವ ಸಿದ್ದಪ್ಪ ನಾಲ್ಕು ತಿಂಗಳ ಗರ್ಭಿಣಿ ಸೊಸೆ ರೇಖಾರ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಖಾಕಿ ತನಿಖೆಯಲ್ಲಿ ಈ ಭೀಕರ ಕೃತ್ಯದ ಹಿಂದಿರುವ ನಿಜವಾದ ಉದ್ದೇಶ ಬಹಿರಂಗವಾಗಿದೆ.
ನಡೆದಿದ್ದೇನು?
ಗುರುವಾರ ಸೊಸೆ ರೇಖಾಳ (24) ಮನೆಗೆ ಬಂದಿದ್ದ ಮಾವ ಸಿದ್ದಪ್ಪ (50), 4 ತಿಂಗಳ ಗರ್ಭಿಣಿ ಸೊಸೆಯ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದ. ಈ ವೇಳೆ ಪ್ರಾಣ ಉಳಿಸಿಕೊಳ್ಳಲು ಮನೆಯಿಂದ ಹೊರಬಂದ ರೇಖಾ, ನರಳಾಡಿ ಸಾವನ್ನಪ್ಪಿದ್ದಳು. ಪ್ರಾಥಮಿಕವಾಗಿ ಕೌಟುಂಬಿಕ ಕಲಹಕ್ಕೆ ಕೊಲೆ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿತ್ತು. ಇತ್ತ ಕೃತ್ಯವೆಸಗಿ ಪರಾರಿಯಾಗಿದ್ದ ಆರೋಪಿ ಸಿದ್ದಪ್ಪನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ ನಂತರ ಎಲ್ಲಾ ಊಹಾಪೋಹಗಳಿಗೆ ತೆರೆ ಬಿದ್ದಿದೆ.
ತನಿಖೆ ವೇಳೆ ಹೊರ ಬಂದ ಸತ್ಯವೇನು?
ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಿ ತಂದಿದ್ದ ಕವಿತಾಳ ಠಾಣೆ ಪೊಲೀಸರು ತನಿಖೆ ಮುಂದಿವರೆಸಿದ್ದರು. ಈ ವೇಳೆ ಮೃತ ರೇಖಾಳ ಆಸ್ತಿ ಮೇಲೆ ಕಣ್ಣು ಹಾಕಿದ್ದ ಮಾವ ಸಿದ್ದಪ್ಪ ನಿತ್ಯ ಆಸ್ತಿಗಾಗಿ ಕಿರುಕುಳ ನೀಡುತ್ತಿದ್ದ ಎಂಬುದು ತಿಳಿದುಬಂದಿದೆ. ಸೊಸೆಯು ತನ್ನ ಪೋಷಕರ ಬಳಿ ಆಸ್ತಿಯನ್ನೂ ಕೇಳುತ್ತಿಲ್ಲ, ಮನೆಗೆಲಸ ಮತ್ತು ಹೊಲದ ಕೆಲಸ ಮಾಡುತ್ತಿಲ್ಲ ಎಂಬ ನೆಪದಲ್ಲಿ ರೇಖಾಳನ್ನು ನಿರಂತರವಾಗಿ ಹಿಂಸಿಸಲಾಗುತ್ತಿತ್ತು ಎಂದು ಆರೋಪಿ ಬಾಯ್ಬಿಟ್ಟಿದ್ದಾನೆ.
For More Updates Join our WhatsApp Group :




