ಬೆಂಗಳೂರು ಲ್ಯಾಂಗ್ಫೋರ್ಡ್ ರಸ್ತೆಯಲ್ಲಿರುವ ಬಂಗಲೆಯಲ್ಲಿ ಘಟನೆ.
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಲ್ಯಾಂಗ್ಫೋರ್ಡ್ ರಸ್ತೆಯಲ್ಲಿರುವ ಬಂಗಲೆಯಲ್ಲಿ ನಡೆದಿದೆ. ಪದೇ ಪದೆ ಐಟಿ ಇಲಾಖೆ ಅಧಿಕಾರಿಗಳಿಂದ ದಾಳಿಗೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಇಂದು ಕೂಡ IT ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಪಿಸ್ತೂಲ್ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಅಶೋಕ್ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
For More Updates Join our WhatsApp Group :




