ಪಟಾಕಿ ಹಚ್ಚಿ ಸಂಭ್ರಮಿಸದಂತೆ ನ್ಯಾಯಾಲಯದ ತಾಕೀತು.
ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ ಅಮೃತಾ ಗೌಡಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಜೀವ್ ಗೌಡಗೆ ಜಾಮೀನು ಸಿಕ್ಕಿದೆ. ಮಂಗಳೂರಿನಲ್ಲಿ ಸ್ಥಳ ಮಹಜರು ಮುಗಿಸಿ ಇಂದು (ಜನವರಿ 30) ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಈ ವೇಳೆ ಶಿಡ್ಲಘಟ್ಟದ ಜೆಎಂಎಫ್ಸಿ ಕೋರ್ಟ್, ರಾಜೀವ್ ಗೌಡನಿಗೆ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.
50 ಸಾವಿರ ರೂಪಾಯಿ ಶ್ಯೂರಿಟಿ ಬಾಂಡ್, ಪೊಲೀಸರ ತನಿಖೆಗೆ ಸಹಕರಿಸಲು ಸೂಚನೆ ನೀಡಿದೆ. ಅಲ್ಲದೇ ಪ್ರಮುಖವಾಗಿ ಜಾಮೀನು ಸಿಕ್ಕ ಖುಷಿಯಲ್ಲಿ ಪಟಾಕಿ ಹಚ್ಚಿ, ಸಂಭ್ರಮಾಚರಣೆ ಮಾಡದಂತೆ ಜಡ್ಜ್ ಮೊಹಮ್ಮದ್ ರೋಷನ್ ಶಾ ತಾಕೀತು ಮಾಡಿದ್ದಾರೆ.
For More Updates Join our WhatsApp Group :




