ಮುರುಘಾಶ್ರೀಗೆ ಹೊಸ ಕಾನೂನು ಸಂಕಷ್ಟ: ಮಠದ ನಿವೇಶನ ಮಾರಾಟ ನಿರ್ಬಂಧ ಉಲ್ಲಂಘನೆ.

ಮುರುಘಾಶ್ರೀಗೆ ಹೊಸ ಕಾನೂನು ಸಂಕಷ್ಟ: ಮಠದ ನಿವೇಶನ ಮಾರಾಟ ನಿರ್ಬಂಧ ಉಲ್ಲಂಘನೆ.

ಚಿತ್ರದುರ್ಗದ ಹೊಸದುರ್ಗದಲ್ಲಿ ಹಳೆ ಪೀಠಾಧಿಪತಿಗೆ ಮತ್ತೊಂದು ದಾವೆ

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ಮುರುಘಾಮಠದ ಮಾಜಿ ಪೀಠಾಧಿಪತಿ ಮುರುಘಾಶ್ರೀಗೆ  ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮುರುಘಾಮಠಕ್ಕೆ ಸೇರಿದ ನಾಲ್ಕು ನಿವೇಶನಗಳನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪದಡಿ ಮುರುಘಾಶ್ರೀ ವಿರುದ್ಧ ಹೊಸದುರ್ಗ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ.

ಮುರುಘಾಮಠದ ಆಡಳಿತ ಸಮಿತಿ ಅಧ್ಯಕ್ಷ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಶಿವಯೋಗಿ ಕಳಸದ್ ಅವರು ಈ ಸಂಬಂಧ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದಾರೆ. ಸರ್ಕಾರದಿಂದ ನೇಮಕಗೊಂಡಿರುವ ಮಠದ ಆಡಳಿತ ಸಮಿತಿಗೆ ಪ್ರಕಾಶ್ ಎಂಬುವರಿಂದ ಈ ಬಗ್ಗೆ ದೂರು ಬಂದಿತ್ತು ಈ ಹಿನ್ನೆಲೆಯಲ್ಲಿ ವಿಷಯವನ್ನು ಪರಿಶೀಲಿಸಲಾಗಿದ್ದು, ಬಳಿಕ ಕೋರ್ಟ್ ಮೊರೆ ಹೋಗಲಾಗಿದೆ.

ಕೋರ್ಟ್ ನಿರ್ಬಂಧ ಇದ್ದರೂ ಮುರುಘಾಶ್ರೀ ಅವರು ಹೊಸದುರ್ಗದ ಎಂ. ಮಂಜುನಾಥ್ ಅವರಿಗೆ ಜನರಲ್ ಪವರ್ ಆಫ್ ಅಟಾರ್ನಿ (ಜಿಪಿಎ) ನೀಡಿ, ಮಠಕ್ಕೆ ಸೇರಿದ ನಾಲ್ಕು ನಿವೇಶನಗಳನ್ನು ಮಮತಾ ಹಾಗೂ ನಳಿನಿ ಎಂಬವರಿಗೆ ಮಾರಾಟ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಜ.30ರಂದು ಮುರುಘಾಮಠದ ಆಡಳಿತ ಸಮಿತಿ ಅಧಿಕೃತವಾಗಿ ನ್ಯಾಯಾಲಯವನ್ನು ಸಂಪರ್ಕಿಸಿದೆ. ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ಮುಂದುವರಿಯಲಿದೆ.

ಈಗಾಗಲೇ A1 ಆರೋಪಿಯಾಗಿರುವ ಮುರುಘಾಶ್ರೀ

ಮುರುಘಾಶ್ರೀ ವಿರುದ್ಧ ಈಗಾಗಲೇ ಫೋಕ್ಸೋ ಕಾಯ್ದೆಯಡಿ ಗಂಭೀರ ಪ್ರಕರಣ ದಾಖಲಾಗಿದ್ದು, ಆ ಪ್ರಕರಣದಲ್ಲಿ ಅವರು ಎ1 ಆರೋಪಿಯಾಗಿದ್ದಾರೆ. ಈ ಹಿನ್ನೆಲೆ ಕೋರ್ಟ್ ಅವರ ಮೇಲೆ ಆಸ್ತಿ ವಹಿವಾಟಿಗೆ ಸಂಬಂಧಿಸಿದಂತೆ ನಿರ್ಬಂಧ ವಿಧಿಸಿತ್ತು. ಅದನ್ನೇ ಉಲ್ಲಂಘಿಸಿ ನಿವೇಶನ ಮಾರಾಟ ನಡೆದಿದೆ ಎಂಬುದು ಆಡಳಿತ ಸಮಿತಿಯ ಆರೋಪವಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *