ಬಜೆಟ್ 2026: ರೈತರಿಗೆ AI ಬೆಂಬಲ.

ಬಜೆಟ್ 2026: ರೈತರಿಗೆ AI ಬೆಂಬಲ.

ಸ್ಮಾರ್ಟ್ ಕೃಷಿಗೆ ‘ಭಾರತ್ ವಿಸ್ತಾರ್’ ಎಐ ಟೂಲ್ ಘೋಷಣೆ.

ನವದೆಹಲಿ: ತಂತ್ರಜ್ಞಾನ ಆಧಾರಿತ ಕೃಷಿಗೆ ಒತ್ತು ನೀಡುವ ಸಲುವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ರ ಕೇಂದ್ರ ಬಜೆಟ್‌ನಲ್ಲಿ ‘ಭಾರತ್ ವಿಸ್ತಾರ್’ ಕೃತಕ ಬುದ್ಧಿಮತ್ತೆ ಟೂಲ್ ಪ್ರಾರಂಭಿಸುವುದಾಗಿ ಘೋಷಿಸಿದರು. ಇದು ಬಹುಭಾಷಾ ಕೃತಕ ಬುದ್ಧಿಮತ್ತೆ (AI) ಸಾಧನವಾಗಿದ್ದು ರೈತರಿಗೆ ಬೆಳೆಗಳು, ಮಣ್ಣು, ಹವಾಮಾನ ಮತ್ತು ಸರ್ಕಾರಿ ಯೋಜನೆಗಳ ಕುರಿತು ಸ್ಥಳೀಯ ಭಾಷೆಗಳಲ್ಲಿ ಮಾಹಿತಿ ಮತ್ತು ವೈಜ್ಞಾನಿಕ ಸಲಹೆಯನ್ನು ನೀಡಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇದನ್ನು ಅಗ್ರಿಸ್ಟ್ಯಾಕ್ ಮತ್ತು ICAR ನಿಂದ ಪ್ರಮಾಣೀಕೃತ ಡೇಟಾವನ್ನು ಸಂಯೋಜಿಸುವ ಮೂಲಕ ಅಭಿವೃದ್ಧಿಪಡಿಸಲಾಗುತ್ತಿದೆ. ಕೃಷಿ ನಿರ್ಧಾರಗಳನ್ನು ಹೆಚ್ಚು ನಿಖರ, ವೇಗ ಮತ್ತು ಕಡಿಮೆ ಸಮಸ್ಯೆಗಳು ಇರುವಂತೆ ನೋಡಿಕೊಳ್ಳುವುದು ಇದರ ಉದ್ದೇಶವಾಗಿದೆ.

ಭಾರತ್ ವಿಸ್ತಾರ್ ಎಂದರೇನು? ಈ ಎಐ ಟೂಲ್ ಹೇಗೆ ಕೆಲಸ ಮಾಡುತ್ತೆ?

ಭಾರತ್ ವಿಸ್ತಾರ್, ಇದರ ವಿಸ್ತರಿತ ರೂಪ ವರ್ಚುವಲಿ ಇಂಟಿಗ್ರೇಟೆಡ್ ಸಿಸ್ಟಮ್ ಟು ಆಕ್ಸೆಸ್ ಅಗ್ರಿಕಲ್ಚರಲ್ ರಿಸೋರ್ಸಸ್ (VISTAAR) ಪ್ಲಾಟ್‌ಫಾರ್ಮ್. ಇದು ಕೃಷಿ-ಸ್ಟ್ಯಾಕ್ ಪೋರ್ಟಲ್ ಮತ್ತು ICAR ಅನುಮೋದಿತ ಕೃಷಿ ಪದ್ಧತಿಗಳನ್ನು ಎಐ ವ್ಯವಸ್ಥೆಗಳೊಂದಿಗೆ ಸಂಯೋಜಿಸುತ್ತದೆ. ರೈತರಿಗೆ ಒಂದೇ ಕಡೆ ವಿಶ್ವಾಸಾರ್ಹ, ವೈಜ್ಞಾನಿಕ ಸಲಹೆಯನ್ನು ಒದಗಿಸುವುದು ಇದರ ಗುರಿಯಾಗಿದೆ. ಇದು ಡೇಟಾ ಮತ್ತು ಸಂಶೋಧನೆಯ ಆಧಾರದ ಮೇಲೆ ಕೃಷಿ ಚಟುವಟಿಕೆಗಳ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಅನುವು ಮಾಡಿಕೊಡುತ್ತದೆ.

ಭಾರತ್ ವಿಸ್ತಾರ್ ಎಐ ಟೂಲ್ ಬೆಳೆ ಮಾದರಿಗಳು, ಮಣ್ಣಿನ ಗುಣಮಟ್ಟ, ಹವಾಮಾನ ಪ್ರವೃತ್ತಿಗಳು ಮತ್ತು ಇತರ ಕೃಷಿ ದತ್ತಾಂಶಗಳನ್ನು ವಿಶ್ಲೇಷಿಸಿ ರೈತರಿಗೆ ಸಲಹೆ ಅಥವಾ ಶಿಫಾರಸುಗಳನ್ನು ಮಾಡುತ್ತದೆ. ಸರ್ಕಾರದ ಪ್ರಕಾರ, ಇದು ರೈತರಿಗೆ ಸರಳ ಮತ್ತು ಪ್ರಾಯೋಗಿಕ ರೀತಿಯಲ್ಲಿ ವೈಜ್ಞಾನಿಕ ಮಾಹಿತಿಯನ್ನು ತಲುಪಿಸುತ್ತದೆ. ಕೃಷಿ ಚಟುವಟಿಕೆಗಳಲ್ಲಿನ ನಷ್ಟವನ್ನು ಕಡಿಮೆ ಮಾಡುವುದು ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವುದು ವೇದಿಕೆಯ ಗುರಿಯಾಗಿದೆ. ಸರಿಯಾದ ಸಮಯದಲ್ಲಿ ನಿಖರವಾದ ಮಾಹಿತಿಯನ್ನು ಒದಗಿಸುವುದು ವೆಚ್ಚಗಳನ್ನು ನಿಯಂತ್ರಿಸಲು ಮತ್ತು ಉತ್ಪಾದನೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *