ಉಡುಪಿ ನಗರದಲ್ಲಿ ಗಂಭೀರ ಘಟನೆ.
ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ತಲ್ವಾರ್ಗಳು ಝಳಪಿಸಿವೆ. ಕಾಂಗ್ರೆಸ್ ಯುವ ಮುಖಂಡನ ಮೇಲೆ ನಗರದ ಪಿಪಿಸಿ ಕ್ರಾಸ್ ಬಳಿ ದಾಳಿ ನಡೆಸಲಾಗಿದ್ದು, ಮಾತುಕತೆಗೆಂದು ಕರೆಸಿ ಅಟ್ಯಾಕ್ ಮಾಡಲಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ಎನ್‌ಎಸ್‌ಯುಐ ಉಪಾಧ್ಯಕ್ಷ ಶರತ್ ಕುಂದರ್ ಗಂಭೀರ ಗಾಯಗೊಂಡಿದ್ದು, 6-7 ದುಷ್ಕರ್ಮಿಗಳ ತಂಡದಿಂದ ದಾಳಿ ನಡೆದಿದೆ. ಮಣಿಪಾಲ ಹೋಟೆಲ್‌ನಲ್ಲಿ ನಡೆದ ಗಲಾಟೆಯ ಮುಂದುವರಿದ ಭಾಗವಾಗಿ ಈ ಘಟನೆ ನಡೆದಿರುವ ಮಾಹಿತಿ ಇದೆ.
ಟಾಟಾ ಸಫಾರಿ, ಮಹೀಂದ್ರ ಥಾರ್ ವಾಹನಗಳಲ್ಲಿ ಬಂದ ಆರೋಪಿಗಳು, ತಲ್ವಾರಿವಾರಿನಿಂದ ದಾಳಿ ನಡೆಸಿ ಕೊಲೆ ಯತ್ನ ನಡೆಸಿದ್ದಾರೆ. ಜೊತೆಗೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆಂಬ ಆರೋಪ ಕೇಳಿಬಂದಿದ್ದು, ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಖಾಕಿ ಹುಡುಕಾಟ ನಡೆಸುತ್ತಿದ್ದು, ತನಿಖೆ ಮುಂದುವರಿದಿದೆ.
For More Updates Join our WhatsApp Group :




