ರಾಮನಗರದಲ್ಲಿ ಅಡಿಗೆ ಅನಿಲ ಅವಘಡ.

ರಾಮನಗರದಲ್ಲಿ ಅಡಿಗೆ ಅನಿಲ ಅವಘಡ.

ಮೂವರು ಕುಟುಂಬದ ಸದಸ್ಯರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು.

ರಾಮನಗರ: ಕನಕಪುರದಅಮರನಾರಾಯಣ ಬ್ಲಾಕ್‌ನಲ್ಲಿ ಜನವರಿ 26ರಂದು ಅಡಿಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಗಢ ಸಂಭವಿಸಿತ್ತು. ಈ ವೇಳೆ ಒಂದೇ ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಯದೇ ಸಾವನ್ನಪಿದ್ದಾರೆಂದು ತಡವಾಗಿ ಬೆಳಕಿಗೆ ಬಂದಿದೆ.

ಒಂದು ವಾರ ಸಾವು ಬದುಕಿನ ನಡುವೆ ಹೋರಾಡಿದ್ದ ಕುಟುಂಬ

ಸೋಮವಾರ (ಜ.26) ಅಡಿಗೆ ಅನಿಲ ಸೋರಿಕೆಯಿಂದ ಸಂಭವಿಸಿದ ಅಗ್ನಿ ದುರಂತದಲ್ಲಿ ಮನೆ ಮಂದಿಯೆಲ್ಲಾ ಗಂಭೀರವಾಗಿ ಗಾಯಗೊಂಡಿದ್ದರು.  ಈ ವೇಳೆ ಸಿದ್ದರಾಜು (55), ಅವರ ಪತ್ನಿ ಚಂದ್ರಮ್ಮ (50) ಹಾಗೂ ಪುತ್ರ ಪ್ರಶಾಂತ್ (22) ಎಂಬ ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನದ್ದಾರೆ.

ಮನೆಯೊಳಗೆ ತಿಂಡಿ ತಯಾರಿಸುವ ವೇಳೆ ಅಡಿಗೆ ಅನಿಲ ಸೋರಿಕೆಯಾಗಿದ್ದು, ಏಕಾಏಕಿ ಬೆಂಕಿ ಹೊತ್ತಿಕೊಂಡಿತ್ತು. ಈ ದುರಂತದಲ್ಲಿ ಮೂವರಿಗೂ ತೀವ್ರ ಸುಟ್ಟ ಗಾಯಗಳಾಗಿದ್ದು, ತಕ್ಷಣವೇ ಹೆಚ್ಚಿನ ಚಿಕಿತ್ಸೆಗೆ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದ್ದರೂ, ಮೂವರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಘಟನೆ ಕನಕಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *