ಕೇರಳದಲ್ಲಿ ಆತಂಕ ಸೃಷ್ಟಿಸಿದ ಘಟನೆ.

ಕೇರಳದಲ್ಲಿ ಆತಂಕ ಸೃಷ್ಟಿಸಿದ ಘಟನೆ.

ಕಲ್ಲಂಗಡಿ ಟ್ರಕ್‌ನಲ್ಲಿ ಸ್ಫೋಟಕ ಪತ್ತೆ

ಕೇರಳ: ವಲಯಾರ್-ವಡಕ್ಕಂಚೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲಂಗಡಿ ಹಣ್ಣನ್ನು ಸಾಗಿಸುತ್ತಿದ್ದ ಟ್ರಕ್​ನಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದು, ಆತಂಕ ಮನೆ ಮಾಡಿದೆ. ತಮಿಳುನಾಡಿನ ಧರ್ಮಪುರಿಯ ಪಾಪರಪಟ್ಟಿ ಮೂಲದ ಲಾರಿ ಚಾಲಕ ಸೆಂಥಿಲ್ ಕುಮಾರ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

100ಕ್ಕೂ ಹೆಚ್ಚು ಪೆಟ್ಟಿಗೆಗಳಲ್ಲಿ, ಜಿಲೆಟಿನ್ ಹಾಗೂ ಡಿಟೋನೇಟರ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಪಾಲಕ್ಕಾಡ್ ಸರ್ಕಾರಿ ವೈದ್ಯಕೀಯ ಕಾಲೇಜು ಬಳಿಯ ಸರ್ವೀಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಲಾರಿಯ ಮೇಲೆ ರಾಶಿ ಹಾಕಿದ್ದ ಕಲ್ಲಂಗಡಿ ಹಣ್ಣುಗಳನ್ನು ತೆಗೆದು ಪರಿಶೀಲಿಸಿದಾಗ ಪೆಟ್ಟಿಗೆಗಳಲ್ಲಿ ಸ್ಫೋಟಕಗಳು ತ್ರಿಶೂರ್​​ಗೆ ಸಾಗಿಸಲಾಗುತ್ತಿತ್ತು ಎಂದು ಸೆಂಥಿಲ್ ಕುಮಾರ್ ತಿಳಿಸಿದ್ದಾರೆ.

ಸುಳಿವು ದೊರೆತ ನಂತರ, ದಕ್ಷಿಣ ಇನ್ಸ್​ಪೆಕ್ಟರ್ ವಿಪಿನ್ ಕುಮಾರ್ ನೇತೃತ್ವದಲ್ಲಿ ತನಿಖೆ ನಡೆಸಲಾಯಿತು. ಬಾಂಬ್ ನಿಷ್ಕ್ರಿಯ ದಳವೂ ಸ್ಥಳಕ್ಕೆ ತಲುಪಿತ್ತು. ಚಾಲಕನನ್ನು ವಿಚಾರಣೆ ನಡೆಸಿದ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಲಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ವರ್ಷವಷ್ಟೇ ಪಾಲಕ್ಕಾಡ್ ಮತ್ತು ಕೊಯಮತ್ತೂರಿನ ಪೊಲೀಸರು ತಮಿಳುನಾಡಿನಿಂದ ಕೇರಳಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ ನಲವತ್ತು ಸಾವಿರಕ್ಕೂ ಹೆಚ್ಚು ಜಿಲೆಟಿನ್​ಗಳು ಹಾಗೂ ಐದು ಸಾವಿರಕ್ಕೂ ಹೆಚ್ಚು ಡಿಟೋನೇಟರ್​ಗಳನ್ನು ವಶಪಡಿಸಿಕೊಂಡಿದ್ದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *