ಮ್ಯೂಲ್ ಅಕೌಂಟ್ ಸೈಬರ್ ದಂಧೆಗೆ CID ಶಾಕ್.!

ಮ್ಯೂಲ್ ಅಕೌಂಟ್ ಸೈಬರ್ ದಂಧೆಗೆ CID ಶಾಕ್.!

ರಾಜ್ಯಾದ್ಯಂತ ಮೆಗಾ ದಾಳಿ, 13 ಮಾಸ್ಟರ್ ಮೈಂಡ್ಸ್ ಅರೆಸ್ಟ್.

ಬೆಂಗಳೂರು: ರಾಜ್ಯದಲ್ಲಿ ಸೈಬರ್ ಪ್ರಕರಣಗಳು  ಹೆಚ್ಚುತ್ತಿರುವ ಬೆನ್ನಲ್ಲೇ ಮ್ಯೂಲ್ ಅಕೌಂಟ್‌ಗಳ ಮೂಲಕ ನಡೆಯುತ್ತಿದ್ದ ಭಾರೀ ಸೈಬರ್ ವಂಚನಾ ದಂಧೆಯನ್ನು ಸಿಐಡಿ ಸೈಬರ್ ಕ್ರೈಂ (CID) ವಿಭಾಗ ಭೇದಿಸಿದೆ.  ಏಕಕಾಲಕ್ಕೆ ನೂರಾರು ಕಡೆ ದಾಳಿ ನಡೆಸಿದ್ದ ಸಿಐಡಿ ತಂಡಗಳು, ಅಕ್ರಮಕ್ಕಾಗಿ ಬಳಸಲಾಗುತ್ತಿದ್ದ 40 ಸಾವಿರಕ್ಕೂ ಹೆಚ್ಚು ಮ್ಯೂಲ್ ಅಕೌಂಟ್​ಗಗಳನ್ನು ಪತ್ತೆ ಹಚ್ಚಿದೆ.

100ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ ನಡೆಸಿದ ಅಧಿಕಾರಿಗಳು

ರಾಜ್ಯದಲ್ಲಿ ರಾಜ್ಯಾದ್ಯಂತ 100ಕ್ಕೂ ಹೆಚ್ಚು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ ಸಿಐಡಿ ತಂಡ, ಫೆಬ್ರವರಿ 6ರಂದು ಈ ಪ್ರಕರಣದ ಪ್ರಮುಖ 13 ಮಾಸ್ಟರ್ ಮೈಂಡ್‌ಗಳನ್ನು ಬಂಧಿಸಿದೆ. ಅಮಾಯಕ ಜನರ ಬ್ಯಾಂಕ್ ಖಾತೆ, ಎಟಿಎಂ ಕಾರ್ಡ್ ಹಾಗೂ ಖಾತೆ ವಿವರಗಳನ್ನು ಹಣಕ್ಕಾಗಿ ಸಂಗ್ರಹಿಸಿ ಸೈಬರ್ ವಂಚಕರಿಗೆ ನೀಡಲಾಗುತ್ತಿತ್ತು ಎಂಬುದು ಸಿಐಡಿ ತನಿಖೆ ವೇಳೆ ಬಯಲಾಗಿದೆ. ಈ ಮ್ಯೂಲ್ ಅಕೌಂಟ್‌ಗಳ ಮೂಲಕ ಆನ್‌ಲೈನ್ ವಂಚನೆ ನಡೆಸಿ ಹಣ ವರ್ಗಾವಣೆ ಹಾಗೂ ಎಟಿಎಂ ಮೂಲಕ ಹಣ ವಿತ್‌ಡ್ರಾ ಮಾಡಲಾಗುತ್ತಿತ್ತು.

40 ಸಾವಿರಕ್ಕೂ ಹೆಚ್ಚು ಅಕ್ರಮ ಅಕೌಂಟ್​ಗಳು!

ಖಾತೆ ವಿವರ ನೀಡಿದ ಅಮಾಯಕರಿಗೆ ಈ ವಂಚನೆಯ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ತಿಳಿದು ಬಂದಿದೆ. ತನಿಖೆಯ ವೇಳೆ ಸುಮಾರು 42 ಸಾವಿರಕ್ಕೂ ಹೆಚ್ಚು ಮ್ಯೂಲ್ ಅಕೌಂಟ್‌ಗಳು ಬಳಕೆಯಲ್ಲಿರುವುದು ಪತ್ತೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳು ಹೆಚ್ಚುತ್ತಿರುವ ಹಿನ್ನೆಲೆ ಮ್ಯೂಲ್ ಅಕೌಂಟ್‌ಗಳ ವಿರುದ್ಧ ಸಿಐಡಿ ತಂಡ ತೀವ್ರ ನಿಗಾ ವಹಿಸಿತ್ತು. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *