ಸತೀಶ್ ಜಾರಕಿಹೊಳಿಯನ್ನು ‘ಕ್ಲೀನ್ ಬೋಲ್ಡ್’ ಮಾಡಿದ ಲಕ್ಷ್ಮೀ ಹೆಬ್ಬಾಳಕರ್.
ಬೆಳಗಾವಿ: ರಾಜಕೀಯದ ಜಂಜಾಟ, ಅಧಿಕಾರದ ಒತ್ತಡಗಳನ್ನು ಬದಿಗಿಟ್ಟು ಬೆಳಗಾವಿಯ ಪ್ರಭಾವಿ ಕಾಂಗ್ರೆಸ್ ನಾಯಕರು ಇಂದು ಕ್ರಿಕೆಟ್ ಆಟವಾಡಿ ಗಮನ ಸೆಳೆದಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ‘ಬಾಕ್ಸ್ ಕ್ರಿಕೆಟ್’ ನೆರೆದಿದ್ದ ಜನರಿಗೆ ಭರಪೂರ ಮನರಂಜನೆ ನೀಡಿದೆ. ಹೌದು.. ಬೆಳಗಾವಿಯಲ್ಲಿ ಬಾಲಭವನ ವತಿಯಿಂದ ನಿರ್ಮಿಸಲಾದ ನೂತನ ಬಾಕ್ಸ್ ಕ್ರಿಕೆಟ್ ಮೈದಾನದ ಉದ್ಘಾಟನೆ ನೆರವೇರಿತು. ಉದ್ಘಾಟನೆಯ ಪ್ರಯುಕ್ತ ಸಚಿವ ಸತೀಶ್ ಜಾರಕಿಹೊಳಿ ಬ್ಯಾಟಿಂಗ್ಗೆ ಇಳಿದರು. ಮತ್ತೊಂದೆಡೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಡಿದ ಬೌಲಿಂಗ್ಗೆ ಸತೀಶ್ ಜಾರಕಿಹೊಳಿ ‘ಕ್ಲೀನ್ ಬೋಲ್ಡ್’ ಆಗಿದ್ದಾರೆ. ಇದನ್ನು ಕಂಡ ನೆರೆದಿದ್ದ ಕಾರ್ಯಕರ್ತರು ಮತ್ತು ಜನರು ಶಿಳ್ಳೆ, ಚಪ್ಪಾಳೆ ತಟ್ಟಿದರು.
For More Updates Join our WhatsApp Group :




