ಕುಟುಂಬವನ್ನೇ ಬೆಚ್ಚಿಬೀಳಿಸಿದ ದುರಂತ.

ಕುಟುಂಬವನ್ನೇ ಬೆಚ್ಚಿಬೀಳಿಸಿದ ದುರಂತ.

ಅಳಿಯನ ಕೊ* ಪ್ರಕರಣದ ನಂತರ ಮಾವ ಸೇರಿ ನಾಲ್ವರು ಆತ್ಮಹ*.

ಬೆಂಗಳೂರು : ನಗರದ ಸೋಲದೇವನಹಳ್ಳಿ  ಪೊಲೀಸ್ ಠಾಣಾ ವ್ಯಾಪ್ತಿಯ ಒಂದೇ ಕುಟುಂಬದ ನಾಲ್ಕು ಮಂದಿ ಆತ್ಮಹತ್ಯೆ ಮಾಡಿಕೊಳ್ಳುವ ಘಟನೆ ನಡೆದಿದೆ. ಕೆಲ ತಿಂಗಳ ಹಿಂದೆ ಫ್ರೀಫೈರ್ ಗೇಮ್ ಅಡಿಕ್ಟ್ ಆಗಿದ್ದ ತನ್ನ ಅಕ್ಕನ ಮಗ ಅಮೋಘಕೀರ್ತಿಯನ್ನು ಕೊಲೆ ಮಾಡಿದ್ದ ಮಾವ ನಾಗಪ್ರಸಾದ್ ಸೇರಿ ನಾಲ್ವರು ಸಾವಿಗೆ ಶರಣಾಗಿದ್ದಾರೆ. ಬಾಲಕನ ಸಾವಿನ ಹಿನ್ನೆಲೆ ಮನನೊಂದಿದ್ದ ಕುಟುಂಬಸ್ಥರು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ಅಳಿಯನ ಕೊಂದ ಪಾಪ ತೊಳೆಯಲು ಮಾವನ ಟೆಂಪಲ್ ರನ್

ಅಮೋಘ ಕೀರ್ತಿಯನ್ನು ಕೊಂದ ಪಾಪ ಪರಿಹಾರಕ್ಕೆ ಇಡೀ ಕುಟುಂಬ ಕೆಲ ತಿಂಗಳಿಂದ ದೇವಾಲಯಗಳಿಗೆ ಭೇಟಿ ನೀಡುತ್ತಿತ್ತು ಎಂದು ತಿಳಿದು ಬಂದಿದೆ. ಇದೀಗ ಬಿಹಾರಕ್ಕೆ ಪ್ರವಾಸ ತೆರಳಿದ್ದ ನಾಗಪ್ರಸನ್ನ ಆತನ ತಾಯಿ ಸುಮಂಗಲಾ78, ಸಹೋದರಿ ಶಿಲ್ಪಾ48, ಶ್ರುತಾ 43 ಎಲ್ಲರೂ ಒಮ್ಮೆಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಶರೀರಗಳ ಬಳಿ ನಿದ್ದೆ ಮಾತ್ರೆಗಳು ಸಿಕ್ಕಿದ್ದು, ಈ ಮಾತ್ರೆಗಳ ಓವರ್ ಡೋಸ್​ನಿಂದಲೇ ಕುಟುಂಬ ಮೃತಪಟ್ಟಿದೆ ಎನ್ನಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *