ತಣ್ಣಗೆ ತಿನ್ನುವ ಆಹಾರಗಳ ಸೇವನೆಗೆ ಎಚ್ಚರಿಕೆ; ಹೃದಯ ಆರೋಗ್ಯದ ಮೇಲೆ ನೇರ ಪರಿಣಾಮ.
ಚಳಿಗಾಲದಲ್ಲಿ ಆಹಾರ ಪದ್ಧತಿಯ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಬಹಳ ಮುಖ್ಯವಾಗುತ್ತದೆ. ಈ ಸಮಯದಲ್ಲಿ ಜನ ಬೇಸಿಗೆಗಿಂತ ಹೆಚ್ಚು ಆಹಾರ ಸೇವನೆ ಮಾಡುತ್ತಾರೆ. ಅದರಲ್ಲಿಯೂ ಕರಿದ ಆಹಾರ ಮತ್ತು ಸಿಹಿತಿಂಡಿಗಳ ಸೇವನೆ ಹೆಚ್ಚಾಗುತ್ತದೆ. ಆದರೆ ಈ ರೀತಿಯ ಆಹಾರಗಳ ಸೇವನೆ ಕೆಟ್ಟ ಕೊಲೆಸ್ಟ್ರಾಲ್ ಅನ್ನು ತ್ವರಿತವಾಗಿ ಹೆಚ್ಚಿಸಬಹುದು ಎಂಬುದನ್ನು ಮರೆಯಬಾರದು. ಅದಕ್ಕೂ ಮೊದಲು ಕೊಲೆಸ್ಟ್ರಾಲ್ ಹೆಚ್ಚಾಗುವುದಕ್ಕೆ ಕಾರಣವೇನು, ಯಾಕೆ ಈ ಸಮಯದಲ್ಲಿ ಜನ ಹೆಚ್ಚು ಹೆಚ್ಚು ಆಹಾರ ಸೇವನೆ ಮಾಡುತ್ತಾರೆ ಎಂಬುದರ ಬಗ್ಗೆ ತಿಳಿಯಬೇಕಾಗುತ್ತದೆ. ಹಾಗಾದರೆ ಯಾವ ರೀತಿಯ ಆಹಾರಗಳ ಸೇವನೆ ಒಳ್ಳೆಯದಲ್ಲ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
ಚಳಿಗಾಲದಲ್ಲಿ ಕೊಲೆಸ್ಟ್ರಾಲ್ ಹೆಚ್ಚಿಸಬಹುದಾದ ಆಹಾರಗಳು:
ಹೆಚ್ಚು ತುಪ್ಪ ಸೇರಿಸಿದ ತರಕಾರಿಗಳು: ಯಾವುದೇ ತರಕಾರಿಗೆ ತುಪ್ಪ ಸೇರಿಸಿ ಅದನ್ನು ಬಿಸಿ ಮಾಡಿ ತಿನ್ನುವುದು ಬಹಳ ಹಾನಿಕಾರಕವಾಗಿದೆ. ಏಕೆಂದರೆ ಇದರಲ್ಲಿ ಹೆಚ್ಚಿನ ಪ್ರಮಾಣದ ಸ್ಯಾಚುರೇಟೆಡ್ ಕೊಬ್ಬಿದ್ದು, ಕೆಟ್ಟ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತದೆ. ಅದರಲ್ಲಿಯೂ ಚಳಿಗಾಲದಲ್ಲಿ, ತುಪ್ಪವನ್ನು ಸೀಮಿತ ಪ್ರಮಾಣದಲ್ಲಿ ಸೇವಿಸಬೇಕು. ತುಪ್ಪವನ್ನು ಹೊರತುಪಡಿಸಿ, ಸಮೋಸಾಗಳು, ಕಚೋರಿ ಅಥವಾ ಪಕೋಡಾಗಳಂತಹ ಕರಿದ ಆಹಾರಗಳ ಸೇವನೆ ಮಾಡುವುದನ್ನು ಆದಷ್ಟು ತಪ್ಪಿಸಬೇಕು. ಇದರಲ್ಲಿ ಹೆಚ್ಚಾಗಿ ಸಂಸ್ಕರಿಸಿದ ಎಣ್ಣೆಯನ್ನು ಬಳಸುವುದರಿಂದ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗುತ್ತದೆ.
ಕೆಂಪು ಮಾಂಸ: ಚಳಿಗಾಲದ ಹೊರತಾಗಿಯೂ, ಹೆಚ್ಚಿನ ಪ್ರಮಾಣದಲ್ಲಿ ಕೆಂಪು ಮಾಂಸ ಸೇವನೆ ಮಾಡುವುದು ಆರೋಗ್ಯಕ್ಕೆ ಹಾನಿಕಾರಕ. ಇದು ಹೆಚ್ಚಿನ ಪ್ರಮಾಣದ ಕೊಬ್ಬು ಮತ್ತು ಕೊಲೆಸ್ಟ್ರಾಲ್ ಅನ್ನು ಹೊಂದಿರುತ್ತದೆ. ಆದ್ದರಿಂದ, ಇದನ್ನು ಮಿತವಾಗಿ ಸೇವಿಸಿ. ಹೃದಯ ಸಂಬಂಧಿ ಸಮಸ್ಯೆಗಳಿದ್ದರೆ, ಅದನ್ನು ಸೇವಿಸದಿರುವುದೇ ಒಳ್ಳೆಯದು. ಜೊತೆಗೆ, ಚಳಿಗಾಲದಲ್ಲಿ, ಹೆಚ್ಚು ಪ್ರಮಾಣದಲ್ಲಿ ಸಕ್ಕರೆ ಸೇವನೆ ಮಾಡುವುದನ್ನು ತಪ್ಪಿಸಬೇಕು.
ಚಳಿಗಾಲದಲ್ಲಿ ನೆನಪಿನಲ್ಲಿಟ್ಟುಕೊಳ್ಳಬೇಕಾದ ವಿಷಯಗಳು
- ಪ್ರತಿದಿನ 30 ನಿಮಿಷಗಳ ನಡಿಗೆ ಮತ್ತು ಲಘು ವ್ಯಾಯಾಮ ಮಾಡಿ.
- ಆಹಾರದಲ್ಲಿ ಹಸಿರು ತರಕಾರಿ ಮತ್ತು ಹಣ್ಣುಗಳ ಸೇವನೆ ಮಾಡಿ.
- ಕನಿಷ್ಠ ತಿಂಗಳಿಗೊಮ್ಮೆ ಕೊಲೆಸ್ಟ್ರಾಲ್ ಮಟ್ಟವನ್ನು ಪರೀಕ್ಷಿಸಿಕೊಳ್ಳಿ.
For More Updates Join our WhatsApp Group :




