ಶಿವಮೊಗ್ಗದಲ್ಲಿ ಏರ್ ಕ್ವಾಲಿಟಿ ದಿಢೀರ್ ಕುಸಿತ

ಶಿವಮೊಗ್ಗದಲ್ಲಿ ಏರ್ ಕ್ವಾಲಿಟಿ ದಿಢೀರ್ ಕುಸಿತ

196ಕ್ಕೆ ತಲುಪಿದ AQI: ಆರೋಗ್ಯಕ್ಕೆ ಎಚ್ಚರಿಕೆ ಅಗತ್ಯ

ಶಿವಮೊಗ್ಗ:  ಕೆಲ ದಿನಗಳಿಂದ ಏರಿಕೆಯಾಗುತ್ತಿದ್ದ ಶಿವಮೊಗ್ಗದ AQI ಇಂದು ಹಠಾತ್ತನೆ ಕಳಪೆ ಮಟ್ಟ ತಲುಪಿದೆ. ನಿನ್ನೆ ತಕ್ಕ ಮಟ್ಟಿಗೆ ಸುಧಾರಿಸಿತೆಂದು ಎಂದುಕೊಂಡ ಬೆಂಗಳೂರಿನ ವಾಯು ಗುಣಮಟ್ಟವೀಗ ಮತ್ತೊಮ್ಮೆ ಕುಸಿತ ಕಂಡಿದೆ. ಅದರೊಂದಿಗೆ ಮಂಗಳೂರು, ಮೈಸೂರು ಮತ್ತು ಬೆಳಗಾವಿಯಲ್ಲೂ ಸಹ ಗಾಳಿಯ ಗುಣಮಟ್ಟ 170ಕ್ಕಿಂತ ಜಾಸ್ತಿಯಾಗಿದೆ. ದಿನದಿಂದ ದಿನಕ್ಕೆ ಈ ನಗರಗಳ AQI ಕುಸಿಯುತ್ತಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 177ಕ್ಕೆ ತಲುಪಿದೆ. ಅದಕ್ಕಿಂತ ಹೆಚ್ಚಾಗಿ ಶಿವಮೊಗ್ಗದ ಏರ್ ಕ್ವಾಲಿಟಿ 196 ಆಗಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ. ಮೂರು ನಾಲ್ಕು ದಿನಗಳ ಹಿಂದೆ 100ರ ಆಸು ಪಾಸಿದ್ದ ಮಂಗಳೂರಿನ AQI, ಇಂದು 174ಕ್ಕೆ ತಲುಪಿದ್ದು ಆಶ್ಚರ್ಯ ಉಂಟು ಮಾಡಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ

  • ಬೆಂಗಳೂರು –177
  • ಮಂಗಳೂರು-175
  • ಮೈಸೂರು –171
  • ಬೆಳಗಾವಿ – 166
  • ಕಲಬುರ್ಗಿ-141
  • ಶಿವಮೊಗ್ಗ – 196
  • ಬಳ್ಳಾರಿ – 162
  • ಹುಬ್ಬಳ್ಳಿ- 144
  • ಉಡುಪಿ –160
  • ವಿಜಯಪುರ –149

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *