ಮೆಟ್ರೋ ದರ ಏರಿಕೆ: ತೇಜಸ್ವಿ ಸೂರ್ಯ ಸರ್ಕಾರ ವಿರುದ್ಧ ಕಿಡಿ.!

ಮೆಟ್ರೋ ದರ ಏರಿಕೆ: ತೇಜಸ್ವಿ ಸೂರ್ಯ ಸರ್ಕಾರ ವಿರುದ್ಧ ಕಿಡಿ.!

“ನಮ್ಮದೇ ಏರಿಯಾದಲ್ಲೇ ನೋಟಿಸ್ ನೀಡಿ ನನ್ನನ್ನು ಹೆದರಿಸಲು ಸಾಧ್ಯವಿಲ್ಲ”

ಬೆಂಗಳೂರು: ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರದ ಗೂಂಡಾಗಳಿಗೇ ಹೆದರದೆ ಹೋರಾಟ ಮಾಡಿ ಬಂದಿದ್ದೇನೆ. ನಮ್ಮದೇ ಏರಿಯಾದಲ್ಲಿ ನೋಟಿಸ್ ಕೊಟ್ಟು ನನ್ನನ್ನು ಹೆದರಿಸಲು ಸಾಧ್ಯವಿಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರತಿಭಟನೆ ನಡೆಸದಂತೆ ಪೊಲೀಸರು ನೀಡಿರುವ ನೋಟಿಸ್ ವಿಚಾರವಾಗಿ ಆಕ್ರೋಶ ವ್ಯಕ್ತಪಡಿಸಿದ ಸೂರ್ಯ, ನಮ್ಮದೇ ಪ್ರದೇಶದಲ್ಲಿ ನನ್ನನ್ನು ಹೆದರಿಸಲು ಸಾಧ್ಯವಿಲ್ಲ ಎಂದರು. ಬೆಂಗಳೂರು ಮೆಟ್ರೋ ದರ ಏರಿಕೆ ಖಂಡಿಸಿ ಅವರು ಜಯನಗರ ಶಾಸಕ ರಾಮಮೂರ್ತಿ ಜತೆಗೂಡಿ ಆರ್​ವಿ ರೋಡ್ ಮೆಟ್ರೋ ನಿಲ್ದಾಣದಲ್ಲಿ ಖಾಲಿ ಟ್ರಂಕ್ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ‘ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ’ ಎಂದು ಬರೆದಿರುವ ಟ್ರಂಕ್‌ನಲ್ಲಿ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ಭಾವಚಿತ್ರಗಳಿದ್ದವು.

ನಾವು ಮೆರವಣಿಗೆ, ಧರಣಿ ಅಥವಾ ಮುಷ್ಕರ ನಡೆಸುತ್ತಿಲ್ಲ, ಬದಲಾಗಿ ಸಾಮಾನ್ಯ ನಾಗರಿಕನಾಗಿ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದೇನೆ ಎಂದು ಅವರು ತಿಳಿಸಿದರು. ಈ ಹೋರಾಟವನ್ನು ಮುಂದುವರಿಸುವುದಾಗಿ ಹೇಳಿದ ಸೂರ್ಯ, ಬೆಂಗಳೂರು ಮೆಟ್ರೋಗೆ ಸರ್ಕಾರ ಬಜೆಟ್ ಬೆಂಬಲ ನೀಡಬೇಕು ಮತ್ತು ಹೊಸ ದರ ನಿಗದಿ ಸಮಿತಿ ರಚಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಆಗ್ರಹಿಸಿದರು. ಬಿಎಂಆರ್​​ಸಿಎಲ್ ಭಾರತದ ಅತಿ ದುಬಾರಿ ಮೆಟ್ರೋ ಆಗಬಾರದು. ಬದಲಿಗೆ ಶುದ್ಧ, ಸುರಕ್ಷಿತ ಮತ್ತು ದಕ್ಷ ಮೆಟ್ರೋ ಆಗಬೇಕು ಎಂದು ಅವರು ಒತ್ತಾಯಿಸಿದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *