ಕೊರೋನಾ ಲಾಸ್‌ ನಂತರ ‘ಮಾಸ್ಕ್ ಮ್ಯಾನ್’ ಚಿನ್ನ ದೋಚಿದ್ದಾನೆ.!

1.25 ಕೆಜಿ ಚಿನ್ನ, 1.84 ಕೋಟಿ ರೂ. ಮೌಲ್ಯ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಕೊರೋನಾ ಸಮಯದಲ್ಲಿ ಟ್ರಾವೆಲ್ಸ್ ವ್ಯವಹಾರದಲ್ಲಿ ನಷ್ಟ ಅನುಭವಿಸಿದ ರಾಜಾ ಎಂಬ ವ್ಯಕ್ತಿ, ಬಳಿಕ ಮಾಸ್ಕ್ ಧರಿಸಿ ಮನೆಗಳ ಮೇಲೆ ದೋಚಿಗೆ ಇಳಿದು ಸೆರೆಯಾಗಿದ್ದಾನೆ.ಕೊರೋನಾ ಸಮಯದಲ್ಲಿ ಟ್ರಾವೆಲ್ಸ್ ವ್ಯವಹಾರದಲ್ಲಿ ನಷ್ಟ ಅನುಭವಿಸಿದ್ದ ವ್ಯಕ್ತಿಯೊಬ್ಬ ಬಳಿಕ ಕಳ್ಳತನಕ್ಕೆ ಇಳಿದು ‘ಮಾಸ್ಕ್ ಮ್ಯಾನ್’ ಆಗಿ ಮನೆಗಳನ್ನು ಟಾರ್ಗೆಟ್ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ರಾಜಾ ಎಂಬ ಆರೋಪಿಯನ್ನು ಬಂಧಿಸಿದ್ದು, ಬಂಧಿತನಿಂದ ಸುಮಾರು 1.84 ಕೋಟಿ ರೂ. ಮೌಲ್ಯದ 1.25 ಕೆಜಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ದಾವಣಗೆರೆ ಭಾಗದಲ್ಲಿ ಟ್ರಾವೆಲ್ಸ್ ವ್ಯವಹಾರ ನಡೆಸುತ್ತಿದ್ದ ರಾಜಾ, ಕೊರೋನಾ ಸಮಯದಲ್ಲಿ ಭಾರೀ ನಷ್ಟ ಅನುಭವಿಸಿದ್ದ. ಜೀವನ ಸಾಗಿಸಲು ಕಷ್ಟವಾಗುತ್ತಿದ್ದ ಹಿನ್ನೆಲೆ ಮಾಸ್ಕ್ ಧರಿಸಿ ಕಳ್ಳತನ ಮಾಡಲು ಆರಂಭಿಸಿದ್ದ.

ಮನೆಗಳಿಗೆ ನುಗ್ಗಿ ಚಿನ್ನಾಭರಣ ಕಳವು ಮಾಡುತ್ತಿದ್ದ ಈತನ ವಿರುದ್ಧ ಈಗಾಗಲೇ 18 ಕಳ್ಳತನ ಪ್ರಕರಣಗಳು ದಾಖಲಾಗಿವೆ. ಬಂಧನದ ಬಳಿಕ ಬೆಂಗಳೂರಿನ ನಾಲ್ಕು ಪ್ರಕರಣಗಳು ಬೆಳಕಿಗೆ ಬಂದಿದ್ದು, ಬೈಯಪ್ಪನಹಳ್ಳಿ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಸಂಬಂಧಿಕರ ಮನೆಗೆ ಸ್ನೇಹಿತರನ್ನು ಕಳುಹಿಸಿ ದರೋಡೆ!

ಬೆಂಗಳೂರು ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಬಂಧಿಕರ ಮನೆಗೆ ಸ್ನೇಹಿತರನ್ನು ಕಳುಹಿಸಿ ದರೋಡೆ ಮಾಡಿಸಿದ ಘಟನೆ ಬೆಳಕಿಗೆ ಬಂದಿದೆ. ಮೊಹಮ್ಮದ್ ಶಬಾಜ್ ಖಾನ್ ಹಾಗೂ ಸೂರಜ್ ಬಿ.ಎನ್ ಅಕ್ಬರ್ ಬಂಧಿತರಾಗಿದ್ದು, ಅಫ್ರೀದ್ ಎಂಬಾತ ತಲೆಮರೆಸಿಕೊಂಡಿದ್ದಾನೆ. ಸಮೀರ್ ಎಂಬ ಸಂಬಂಧಿಕನಿಗೆ ಆಸ್ತಿ ಸಂಬಂಧ ಹಣ ಬಂದಿರುವ ಮಾಹಿತಿ ತಿಳಿದಿದ್ದ ಅಫ್ರೀದ್, ತನ್ನ ಸ್ನೇಹಿತರನ್ನು ಕಳುಹಿಸಿ ಮನೆಗೆ ನುಗ್ಗಿಸಿ ರಾಬರಿ ಮಾಡಿಸಿದ್ದಾನೆ. ಸಮೀರ್ ಪತ್ನಿ ಒಬ್ಬರೇ ಇದ್ದ ವೇಳೆ ಮಚ್ಚು ತೋರಿಸಿ ಬೆದರಿಸಿ ಚಿನ್ನ ಹಾಗೂ 4 ಲಕ್ಷ ನಗದು ಕದ್ದಿದ್ದಾರೆ. ಬಂಧಿತರಿಂದ 2.96 ಲಕ್ಷ ನಗದು ಮತ್ತು ಬಂಗಾರ ಸೇರಿ 7.4 ಲಕ್ಷ ರೂ. ಮೌಲ್ಯದ ಆಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *