ಪತ್ನಿಗೆ ಡಿವೋರ್ಸ್ ನೀಡದೆ 2ನೇ ಮದುವೆಗೆ ಯತ್ನ; ಯುವತಿಗೆ ಶಾಕ್

ಪತ್ನಿಗೆ ಡಿವೋರ್ಸ್ ನೀಡದೆ 2ನೇ ಮದುವೆಗೆ ಯತ್ನ; ಯುವತಿಗೆ ಶಾಕ್

ಮೊದಲ ಮದುವೆ ಇನ್ನೂ ನಿಗದಿ ಆಗದೆ, ಹರಿಪ್ರಸಾದ್ ವಿರುದ್ಧ ದೂರು.

ತುಮಕೂರು: ಪತ್ನಿಗೆ ವಿಚ್ಛೇದನ ನೀಡದೆ ಮತ್ತೊಬ್ಬಳ ಜೊತೆ ವಿವಾಹವಾಗಲು ಹೊರಟಿದ್ದ ವೇಳೆ ಕಲ್ಯಾಣಮಂಟಪಕ್ಖೇ ಪೊಲೀಸರ ಜೊತೆ ನುಗ್ಗಿ ಪತಿಗೆ ಮಹಿಳೆ ಶಾಕ್​​ ಕೊಟ್ಟ ಘಟನೆ ನಿನ್ನೆ ತುಮಕೂರಿನ ಎಡೆಯೂರಲ್ಲಿ ನಡೆದಿತ್ತು. ಪ್ರಕರಣ ಸಂಬಂಧ ಅರೋಪಿ ಹರಿಪ್ರಸಾದ್​​ಗೆ ಈಗ ಮತ್ತೊಂದು ಶಾಕ್​​ ಸಿಕ್ಕಿದೆ. ಈತ ಎರಡನೇ ವಿವಾಹವಾಗಲು ಹೊರಟಿದ್ದ ಮಂಡ್ಯ ಮೂಲದ ಯುವತಿಯೂ ಈಗ ದೂರು ನೀಡಿದ್ದಾಳೆ. ಮೊದಲ ಮದುವೆ ಮುಚ್ಚಿಟ್ಟು 2ನೇ ಮದುವೆಯಾಗ್ತಿದ್ದ ಹರಿಪ್ರಸಾದ್​​, ವಿವಾಹಕ್ಕೆಂದು ಲಕ್ಷಾಂತರ ಹಣ ಮತ್ತು ಚಿನ್ನಾಭರಣ ಪಡೆದಿದ್ದಾನೆ ಎಂದು ಆರೋಪಿಸಲಾಗಿದೆ. ಅಲ್ಲದೆ ಯುವತಿಯ ಕೆಲ ಫೋಟೋ ಇಟ್ಟುಕೊಂಡಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಎನ್​ಸಿಆರ್ ದಾಖಲಿಸಿದ ಅಮೃತೂರು ಪೊಲೀಸರು, ವಂಚನೆ ಸಂಬಂಧ ಮಂಡ್ಯದಲ್ಲಿ ದೂರು ನೀಡುವಂತೆ ಸೂಚನೆ ನೀಡಿದ್ದಾರೆ. ಮೊದಲ ಹೆಂಡತಿ ಡೈವರ್ಸ್ ವಿಚಾರ ಇನ್ನೂ ಕೋರ್ಟ್​ನಲ್ಲಿ ಇರುವಾಗಲೇ ಈತ ಮತ್ತೊಂದು ಮದುವೆಗೆ ಮುಂದಾಗಿದ್ದ. ಬೆಂಗಳೂರಲ್ಲಿ ಖಾಸಗಿ ಶಾಲೆಯ ದೈಹಿಕ ಶಿಕ್ಷಕನಾಗಿರುವ ಹರಿಪ್ರಸಾದ್​​ಗೆ ಮಂಡ್ಯದ ಯುವತಿ ಕಳೆದ 3 ವರ್ಷಗಳ ಹಿಂದೆ ಪರಿಚಯವಾಗಿದ್ದಳು. ಆದರೆ ಮೊದಲನೇ ಮದುವೆ ವಿಚಾರ ಯುವತಿ ಹಾಗೂ ಆಕೆಯ ತಾಯಿಗೆ ಗೊತ್ತಿತ್ತು ಎಂದು ಹರಿಪ್ರಸಾದ್ ಹೇಳಿದ್ದಾನೆ ಎನ್ನಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *