ನಾಳೆಗೆ ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ.

ನಾಳೆಗೆ ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ.

6ನೇ ಗ್ಯಾರಂಟಿ ‘ಭೂಮಿ ಹಕ್ಕು’ ಜಾರಿ: ಡಿಕೆ ಶಿವಕುಮಾರ್

ಬೆಂಗಳೂರು: ನಾಳೆಗೆ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು 1 ಸಾವಿರ ದಿನ. ಹಾಗಾಗಿ ನಾಳೆ ಹಾಗೂ ನಾಡಿದ್ದು ನೀರಾವರಿ ವಿಚಾರದಲ್ಲಿ ಸಮ್ಮೇಳನವನ್ನು ಹಮ್ಮಿಕೊಂಡಿದ್ದೇವೆ. ಕೇಂದ್ರ ಮಂತ್ರಿಗಳು, ಸಿಎಂ ಸಿದ್ದರಾಮಯ್ಯ ಭಾಗಿಯಾಗುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್​ ಹೇಳಿದ್ದಾರೆ.

 ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆರನೇ ಗ್ಯಾರಂಟಿ ಯೋಜನೆಯಾದ ಭೂಮಿ ಗ್ಯಾರಂಟಿ ಬಗ್ಗೆ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರಿಗೆ ನಿವೇಶನಗಳಿಗೆ ಭೂಮಿ ಹಕ್ಕುಗಳನ್ನು ಒದಗಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಭೂಮಿ ಹಕ್ಕುಗಳಿಲ್ಲದ ಸಾಮಾನ್ಯ ಜನರಿಗೆ ಖಾತೆ ಮತ್ತು ಹಕ್ಕುಪತ್ರಗಳನ್ನು ನೀಡುವ ದೀರ್ಘಕಾಲದ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *