ಹೊಸಕೋಟೆ ಬಳಿ ಭೀಕರ ರಸ್ತೆ ಅಪಘಾತ.

ಹೊಸಕೋಟೆ ಬಳಿ ಭೀಕರ ರಸ್ತೆ ಅಪಘಾತ.

ಸರಣಿ ಡಿಕ್ಕಿ: 7 ಮಂದಿ ದುರ್ಮರಣ.

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ಶುಕ್ರವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿ ಏಳು ಜನ ದುರ್ಮರಣ ಹೊಂದಿದ್ದಾರೆ. ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್ ​ಯುವಿ ಕಾರಿನ ನಡುವೆ ಸರಣಿ ಡಿಕ್ಕಿ ಸಂಭವಿಸಿದ್ದು, ಘಟನೆ ಸ್ಥಳದಲ್ಲೇ ಕಾರಿನಲ್ಲಿದ್ದ ಆರು ಮಂದಿ ಮತ್ತು ಬೈಕ್ ಸವಾರ ಸಾವನ್ನಪ್ಪಿದ್ದಾರೆ.

ಅತಿವೇಗವೇ ಅಪಘಾತಕ್ಕೆ ಕಾರಣವಾಗಿರಬಹುದೆಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಹೆದ್ದಾರಿಯಲ್ಲಿ ಸಾಗುತ್ತಿದ್ದ ಎಕ್ಸ್ ​ಯುವಿ ಕಾರು ಮೊದಲು ಮುಂದೆ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಬಳಿಕ ನಿಯಂತ್ರಣ ತಪ್ಪಿ ಕ್ಯಾಂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಮೃತಪಟ್ಟವರಲ್ಲಿ ಆರು ಮಂದಿ ಬೆಂಗಳೂರಿನ ಕೊತ್ತನೂರು ಮೂಲದವರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಎಸ್​​ಪಿ ಚಂದ್ರಕಾಂತ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅತಿವೇಗವೇ ಅಪಘಾತಕ್ಕೆ ಕಾರಣ ಎಂಬುದಾಗಿ ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹಗಳನ್ನು ಹೊಸಕೋಟೆಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಅವೈಜ್ಞಾನಿಕ ರಸ್ತೆಯಿಂದಲೇ ಆಗುತ್ತಿದೆಯಾ ಅಪಘಾತ? ಸ್ಥಳೀಯರಿಂದ ಗಂಭೀರ ಆರೋಪ

ಹೆದ್ದಾರಿಯ ಕಳಪೆ ನಿರ್ಮಾಣ ಮತ್ತು ವಿನ್ಯಾಸದ ಬಗ್ಗೆ ಸ್ತಳೀಯರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸಾಧುಪ್ಪನಹಳ್ಳಿಯಿಂದ ಕಮಳಿಪುರ ಬ್ರಿಡ್ಜ್ ವರೆಗಿನ ಈ ರಸ್ತೆಯು ಸರಿಯಾದ ವಿನ್ಯಾಸವನ್ನು ಹೊಂದಿಲ್ಲ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NH) ಈ ರಸ್ತೆಯನ್ನು ಅವೈಜ್ಞಾನಿಕವಾಗಿ ನಿರ್ಮಿಸಿದೆ. ಹೆದ್ದಾರಿಯ ವಿನ್ಯಾಸದ ಬಗ್ಗೆ ಕಾಮಗಾರಿ ಸಂದರ್ಭದಲ್ಲೇ ಎಂಜಿನಿಯರ್ ಒಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದರು ಎಂದು ಕಮಳಿಪುರ ಗ್ರಾಮದ ಮಂಜುನಾಥ್ ಗಂಭೀರ ಆರೋಪ ಮಾಡಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *