ವಾರಕ್ಕೆ 800 ರೂ. ಸಂಬಳ: 24 ಒಡಿಶಾ ಮೂಲದ ಕಾರ್ಮಿಕರ ರಕ್ಷಣೆ.

ವಾರಕ್ಕೆ 800 ರೂ. ಸಂಬಳ: 24 ಒಡಿಶಾ ಮೂಲದ ಕಾರ್ಮಿಕರ ರಕ್ಷಣೆ

ಜೀತಕ್ಕೆ ದುಡಿಯುತ್ತಿದ್ದವರು ಉಳಿಸಿಕೊಂಡರು.

ಬಾಗಲಕೋಟೆ: ಜಿಲ್ಲೆಯ ಇಳಕಲ್ ತಾಲೂಕಿನ ಸಂಕ್ಲಾಪುರ ಗ್ರಾಮದ ಇಟ್ಟಿಗೆ ಭಟ್ಟಿಯಲ್ಲಿ ಜೀತಕ್ಕೆ ದುಡಿಯುತ್ತಿದ್ದ ಐವರು ಬಾಲ ಕಾರ್ಮಿಕರು ಸೇರಿದಂತೆ ಒಡಿಶಾ ಮೂಲದ ಒಟ್ಟು 24 ಮಂದಿಯನ್ನು ಇಳಕಲ್ ತಹಶೀಲ್ದಾರ್, ಕಾರ್ಮಿಕ ಇಲಾಖೆ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಈರಪ್ಪ ಕುಂಬಾರ ಎಂಬುವರ ಇಟ್ಟಿಗೆ ಭಟ್ಟಿಯಲ್ಲಿ ಇವರು ಕೆಲಸ ಮಾಡುತ್ತಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ. ಬಾಲ ಕಾರ್ಮಿಕ ನಿಷೇಧ‌‌ ಮತ್ತು ಜೀತ ಪದ್ಧತಿ ನಿಷೇಧ ಕಾಯ್ದೆಯಡಿ ಇಳಕಲ್ ಗ್ರಾಮೀಣ ಪೊಲೀಸ್​​ ಠಾಣೆಯಲ್ಲಿ ಕೇಸ್​​ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.

ಇಟ್ಟಿಗೆ ಭಟ್ಟಿಯಲ್ಲಿ ಜೀತದಾಳುಗಳಾಗಿ ಹಲವರು ದುಡಿಯುತ್ತಿದ್ದಾರೆ ಎಂಬ ಬಗ್ಗೆ ಜಿಲ್ಲಾ ಆಡಳಿತಕ್ಕೆ ದೂರು ಬಂದಿದ್ದ ಹಿನ್ನೆಲೆ, ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿಲೋ ಮೀಟರ್​​ ದೂರದಲ್ಲಿರುವ ಸಂಕ್ಲಾಪುರ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿ ಒತ್ತೆಯಾಳು ಕಾರ್ಮಿಕರ ರಕ್ಷಣೆ ಮಾಡಲಾಗಿದೆ. ಆ ಮೂಲಕ ಕಳೆದ ಮೂರು ತಿಂಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 99 ಜೀತದಾಳುಗಳ ರಕ್ಷಣೆ ಮಾಡಿದಂತಾಗಿದೆ. ಇಟ್ಟಿಗೆ ಭಟ್ಟಿಯಲ್ಲಿ ದುಡಿಯುತ್ತಿದ್ದ ಕಾರ್ಮಿಕರ ರಕ್ಷಣೆಯ ಬಳಿಕ ಅವರೆಲ್ಲರಿಗೆ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ಎಲ್ಲರೂ ಆರೋಗ್ಯವಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ಅವರನ್ನು ಮರಳಿ ಒಡಿಶಾಗೆ ಕಳುಹಿಸಲು ಅಗತ್ಯ ಕ್ರಮಗಳನ್ನು ಅಧಿಕಾರಿಗಳು ಕೈಗೊಂಡಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *