ಯತ್ನಾಳ್ ಸ್ಫೋಟಕ ಹೇಳಿಕೆ, ಬಿಜೆಪಿ ಒಳಜಗಳ ಬಯಲು.
ಉಡುಪಿ: ಕಳೆದ ಲೋಕಸಭಾ ಚುನಾವಣೆ ಸಮಯದಿಂದಲೇ ರಾಜಕಾರಣದಿಂದ ದೂರ ಉಳಿದಿರುವ ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ ರಾಜ್ಯ ರಾಜಕಾರಣಕ್ಕೆ ಬರುತ್ತಾರೆಂಬ ಸುದ್ದಿ ಕಳೆದ ಕೆಲ ದಿನಗಳಿಂದ ಹರಿದಾಡ್ತಿದೆ. ಹಿಂದೂ ಕಾರ್ಯಕರ್ತರ ಪಾಲಿಗೆ ಫೈರ್ ಬ್ರ್ಯಾಂಡ್ ರಾಜಕಾರಣಿ ಎಂದೇ ಗುರುತಿಸಿಕೊಂಡಿರುವ ಅನಂತ್ ಕುಮಾರ್ ಮತ್ತೆ ರಾಜಕಾರಣಕ್ಕೆ ಬರಲಿ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ. ಈ ಹೊತ್ತಲ್ಲಿ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಯತ್ನಾಳ್ ಹೇಳಿದ್ದೇನು?
ರಾಜ್ಯ ರಾಜಕಾರಣಕ್ಕೆ ಬರುವ ವಿಚಾರ ಸಂಬಂಧ ಅನಂತ್ ಕುಮಾರ್ ಹೆಗಡೆ ವೈಯಕ್ತಿಕವಾಗಿ ಎಲ್ಲೂ ಪ್ರತಿಕ್ರಿಯೆ ಕೊಟ್ಟಿಲ್ಲ. ಸಾಮಾಜಿಕ ಜಾಲತಾಣದಲ್ಲಿ ದೆಹಲಿಗೆ ಬುಲಾವ್ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಆ ಬಗ್ಗೆ ಯಾವುದೇ ದೃಢ ಮಾಹಿತಿ ಇನ್ನೂ ಸಿಕ್ಕಿಲ್ಲ. ಹೀಗಾಗಿ ರಾಜ್ಯ ರಾಜಕಾರಣಕ್ಕೆ ಬರಲು ಅವರಿಗೆ ಮನಸ್ಸಿದೆಯೋ? ಇಲ್ಲವೋ? ಎಂಬುದನ್ನು ಅವರೇ ಬಹಿರಂಗಪಡಿಸಬೇಕು. ಬಿಜೆಪಿಯಲ್ಲಿ ಒಳ್ಳೆಯ ನಾಯಕತ್ವವನ್ನು ಮುಗಿಸುತ್ತಾರೆ. ತಂದೆ ಮಕ್ಕಳ ಸಹವಾಸದಿಂದ ಹೀಗೆ ಆಗಿದ್ದು, ಇಂತವರಿಗೆ ನಾಯಕತ್ವ ನೀಡಬೇಕು ಎಂದು ಕೇಂದ್ರ ಸರ್ಕಾರ ನಿರ್ಧರಿಸಬೇಕು ಎಂದಿದ್ದಾರೆ.
ವಿಧಾನಸಭೆಯಲ್ಲಿ ಕೂಡ ಕೆಲ ಬಿಜೆಪಿಗರು ಮಾತನಾಡದೆ ಹೊಂದಾಣಿಕೆ ರಾಜಕೀಯ ಮಾಡುತ್ತಿದ್ದಾರೆ. ವಿಜಯೇಂದ್ರ ನಿನ್ನ ಫೈಲ್ ತೆಗೆಯಲಾ ಎಂದು ಡಿ.ಕೆ ಶಿವಕುಮಾರ್ ನೇರವಾಗಿ ಬೆದರಿಸುತ್ತಾರೆ. ಬಿಜೆಪಿ ತನ್ನ ನೈತಿಕ ಶಕ್ತಿಯನ್ನೇ ವಿಧಾನಸಭೆಯಲ್ಲಿ ಕಳೆದುಕೊಂಡಿದೆ. ಹೀಗಿದ್ದರೂ ಕೇಂದ್ರದ ನಾಯಕರಿಗೆ ಯಾಕೆ ವಿಶೇಷ ಮಮಕಾರ ಇದೆಯೋ ಗೊತ್ತಿಲ್ಲ. ಕುಟುಂಬ ರಾಜಕೀಯಕ್ಕೆ ಅವಕಾಶ ನೀಡಲ್ಲ ಎಂದು ಪ್ರಧಾನಿ ಪದೇಪದೇ ಹೇಳುತ್ತಾರೆ. ಆದರೆ ಕರ್ನಾಟಕದಲ್ಲಿ ಆ ವಿಚಾರ ಮರೆತು ಹೋಗಿರುವುದು ದುರ್ದೈವ ಎಂದು ಯತ್ನಾಳ್ ಕಿಡಿ ಕಾರಿದ್ದಾರೆ.
For More Updates Join our WhatsApp Group :




