ಭಾರತ–ಪಾಕಿಸ್ತಾನ್ T20 ವಿಶ್ವಕಪ್ ದಾಖಲೆ.
ಟಿ20 ವಿಶ್ವಕಪ್ನ 27ನೇ ಪಂದ್ಯದಲ್ಲಿ ಭಾರತ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 175 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡ ಗಳಿಸಿದ್ದು ಕೇವಲ 114 ರನ್ ಮಾತ್ರ. ಈ ಮೂಲಕ ಟೀಮ್ ಇಂಡಿಯಾ 61 ರನ್ಗಳ ಅಮೋಘ ಗೆಲುವು ದಾಖಲಿಸಿದೆ.
ಬಹುನಿರೀಕ್ಷಿತ ಪಂದ್ಯದಲ್ಲಿ ನಿರೀಕ್ಷೆಯಂತೆ ಭಾರತ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಅದು ಕೂಡ ಬರೋಬ್ಬರಿ 61 ರನ್ಗಳ ಅಂತರದಿಂದ. ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು.
ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾಗೆ ಇಶಾನ್ ಕಿಶನ್ (77) ಸ್ಫೋಟಕ ಆರಂಭ ಒದಗಿಸಿದ್ದರು. ಈ ಭರ್ಜರಿ ಆರಂಭದ ನೆರವಿನೊಂದಿಗೆ ಭಾರತ ತಂಡವು 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 175 ರನ್ ಕಲೆಹಾಕಿತು. ಈ ಮೂಲಕ ಪಾಕ್ ಪಡೆಗೆ 176 ರನ್ಗಳ ಕಠಿಣ ಗುರಿ ನೀಡಿದ್ದರು.
ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡವು ಪವರ್ಪ್ಲೇನಲ್ಲೇ 4 ವಿಕೆಟ್ ಕಳೆದುಕೊಂಡಿದ್ದರು. ಈ ಆಘಾತದಿಂದ ಹೊರಬರುವ ಮುನ್ನವೇ ಟೀಮ್ ಇಂಡಿಯಾ ಪಾಕ್ ತಂಡವನ್ನು 18 ಓವರ್ಗಳಲ್ಲಿ 114 ರನ್ಗಳಿಗೆ ಆಲೌಟ್ ಮಾಡಿದರು. ಈ ಮೂಲಕ ಟೀಮ್ ಇಂಡಿಯಾ 61 ರನ್ಗಳ ಭರ್ಜರಿ ಜಯ ಸಾಧಿಸಿತು.
ಈ ಭರ್ಜರಿ ಗೆಲುವಿನೊಂದಿಗೆ ಟೀಮ್ ಇಂಡಿಯಾ ಟಿ20 ವಿಶ್ವಕಪ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ 8 ಗೆಲುವುಗಳೊಂದಿಗೆ ಎಂಬುದು ವಿಶೇಷ. ಅಂದರೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಒಂದೇ ತಂಡದ ವಿರುದ್ಧ ಅತ್ಯಧಿಕ ಗೆಲುವು ದಾಖಲಿಸಿದ ವಿಶ್ವ ದಾಖಲೆಯೊಂದು ಟೀಮ್ ಇಂಡಿಯಾ ಪಾಲಾಗಿದೆ.
ಟಿ20 ವಿಶ್ವಕಪ್ನಲ್ಲಿ ಭಾರತ ಮತ್ತು ಪಾಕಿಸ್ತಾನ್ ಈವರೆಗೆ 9 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 8 ಬಾರಿ ಗೆಲುವು ದಾಖಲಿಸಿದೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲಿ ಒಂದೇ ತಂಡದ ವಿರುದ್ಧ ಅತೀ ಹೆಚ್ಚು ಗೆಲುವುಗಳನ್ನು ದಾಖಲಿಸಿದ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ.
ವಿಶೇಷ ಎಂದರೆ ಭಾರತವನ್ನು ಹೊರತುಪಡಿಸಿ ಯಾವುದೇ ತಂಡ ಪಾಕಿಸ್ತಾನ್ ವಿರುದ್ಧ ಟಿ20 ವಿಶ್ವಕಪ್ನಲ್ಲಿ 5 ಕ್ಕಿಂತ ಹೆಚ್ಚಿನ ಬಾರಿ ಗೆಲುವು ದಾಖಲಿಸಿಲ್ಲ. ಇತ್ತ ಟೀಮ್ ಇಂಡಿಯಾ ಬರೋಬ್ಬರಿ 8 ಬಾರಿ ಪಾಕ್ ಪಡೆಗೆ ಮಣ್ಣು ಮುಕ್ಕಿಸಿ ಇದೀಗ ವಿಶ್ವ ದಾಖಲೆಯನ್ನೇ ನಿರ್ಮಿಸಿದೆ. ಅಂದರೆ ಭಾರತದ ವಿರುದ್ಧ ಸೋತು ಸೋತು ಪಾಕಿಸ್ತಾನ್ ತಂಡ ಟಿ20 ವಿಶ್ವಕಪ್ನಲ್ಲಿ ಒಂದೇ ತಂಡದ ವಿರುದ್ಧ ಅತ್ಯಧಿಕ ಸೋಲುಂಡ ತಂಡ ಎನಿಸಿಕೊಂಡಿದೆ.
For More Updates Join our WhatsApp Group :




