ಟೀಮ್ ಇಂಡಿಯಾ ಭರ್ಜರಿ ಗೆಲುವಿನ ಮೇಲೆ ಶಿವರಾತ್ರಿಯ ‘ಭೀತಿ’.

ಟೀಮ್ ಇಂಡಿಯಾ ಭರ್ಜರಿ ಗೆಲುವಿನ ಮೇಲೆ ಶಿವರಾತ್ರಿಯ ‘ಭೀತಿ’.

ಪಾಕಿಸ್ತಾನ್ ವಿರುದ್ಧ 61 ರನ್ ಜಯ, ಆದರೂ ವಿಶ್ವಕಪ್ ಗೆಲ್ಲುವ ಸಾಧ್ಯತೆ ಕುರಿತು ಅಭಿಮಾನಿಗಳಲ್ಲಿ ಚಿಂತೆ

ಭಾರತ ತಂಡವು ಟಿ20 ವಿಶ್ವಕಪ್​ನ 27ನೇ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಸೂಪರ್-8 ಹಂತಕ್ಕೇರಿದೆ. ಕೊಲಂಬೊದಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 175 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡ 18 ಓವರ್​ಗಳಲ್ಲಿ 114 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 61 ರನ್​ಗಳ ಜಯ ಸಾಧಿಸಿದೆ.

ಈ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ ವಿಶ್ವಕಪ್ ಸೋಲಿನ ಭೀತಿ ಎದುರಾಗಿದೆ. ಅಂದರೆ ಶಿವರಾತ್ರಿಯಂದು ಪಂದ್ಯ ಗೆದ್ದರೆ ಭಾರತ ವಿಶ್ವಕಪ್ ಗೆಲ್ಲುವುದಿಲ್ಲ ಎಂಬ ಪ್ರತೀತಿ ಇದೆ. ಇದಕ್ಕೆ ಸಾಕ್ಷಿಯಾಗಿ ಈ ಹಿಂದಿನ ಅಂಕಿ ಅಂಶಗಳನ್ನು ಮುಂದಿಡಲಾಗುತ್ತಿದೆ. ಕಾಕತಾಳೀಯ ಎಂಬಂತೆ ಈ ಹಿಂದೆ ಭಾರತ ತಂಡವು ಶಿವರಾತ್ರಿಯ ದಿನದಂದು ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದರೂ ವಿಶ್ವಕಪ್ ಗೆಲ್ಲಲು ಸಾಧ್ಯವಾಗಿರಲಿಲ್ಲ.

  • 2023 ರಲ್ಲಿ ನಡೆದ ಏಕದಿನ ವಿಶ್ವಕಪ್​ನಲ್ಲಿ ಪಾಕಿಸ್ತಾನ್ ವಿರುದ್ಧ ಭಾರತ ಅಮೋಘ ಗೆಲುವು ದಾಖಲಿಸಿತ್ತು. ಮಹಾ ಶಿವರಾತ್ರಿ ದಿನ ನಡೆದಿದ್ದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ 6 ವಿಕೆಟ್​ಗಳ ವಿಜಯ ಸಾಧಿಸಿತ್ತು.
  • 2015ರ ಏಕದಿನ ವಿಶ್ವಕಪ್​ನಲ್ಲಿ ಭಾರತ ತಂಡವು ಪಾಕಿಸ್ತಾನ್ ವಿರುದ್ಧ ಭರ್ಜರಿ ಜಯ ಸಾಧಿಸಿತ್ತು. ಶಿವರಾತ್ತಿಯಂದು ನಡೆದಿದ್ದ ಆ ಪಂದ್ಯವನ್ನು ಟೀಮ್ ಇಂಡಿಯಾ 76 ರನ್​ಗಳಿಂದ ಗೆದ್ದುಕೊಂಡಿದ್ದರು.

ಈ ಎರಡೂ ವಿಶ್ವಕಪ್​ನಲ್ಲೂ ಭಾರತ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿರಲಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ. ಈ ಎರಡೂ ವಿಶ್ವಕಪ್​ಗಳಲ್ಲೂ ಆಸ್ಟ್ರೇಲಿಯಾ ವಿರುದ್ಧವೇ ಸೋಲನುಭವಿಸಿ ಟ್ರೋಫಿ ಗೆಲ್ಲುವ ಅವಕಾಶವನ್ನು ಕೈಚೆಲ್ಲಿಕೊಂಡಿದ್ದರು.

  • 2003 ರ ಏಕದಿನ ವಿಶ್ವಕಪ್​ನ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡವು 125 ರನ್​ಗಳ ಅಂತರದಿಂದ ಹೀನಾಯ ಸೋಲನುಭವಿಸಿತ್ತು.
  • 2015 ರ ಏಕದಿನ ವಿಶ್ವಕಪ್​ನ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತು ಟೀಮ್ ಇಂಡಿಯಾ ಟೂರ್ನಿಯಿಂದ ಹೊರಬಿದ್ದಿತ್ತು.

ಅಂದರೆ ಶಿವರಾತ್ರಿಯಂದು ಭಾರತ ತಂಡ ಪಾಕಿಸ್ತಾನ್ ವಿರುದ್ಧ ಗೆದ್ದಾಗ ವಿಶ್ವಕಪ್ ಗೆಲ್ಲಲು ಸಾಧ್ಯವಾಗಿರಲಿಲ್ಲ. ಇದೇ ಕಾಕತಾಳೀಯತೆಯನ್ನು ಮುಂದಿಟ್ಟುಕೊಂಡು ಈ ಬಾರಿ ಭಾರತ ತಂಡ ಕಪ್ ಗೆಲ್ಲುವುದು ಅನುಮಾನ ಎನ್ನಲಾಗುತ್ತಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *