ರಾಜಾಜಿನಗರದಲ್ಲಿ ಭೀಕರ ಅಪಘಾತ: ಯುವತಿ ಸಾ*

ರಾಜಾಜಿನಗರದಲ್ಲಿ ಭೀಕರ ಅಪಘಾತ: ಯುವತಿ ಸಾ*

ರಸ್ತೆ ದಾಟುತ್ತಿದ್ದ ವೇಳೆ ವೇಗದ ಬೈಕ್ ಡಿಕ್ಕಿ; ಗಾಯಗೊಂಡ ಯೋಗೇಶ್ವರಿ ಚಿಕಿತ್ಸೆ ಫಲಕಾರಿಯಾಗದೆ ನಿಧನ

ಬೆಂಗಳೂರು : ರಸ್ತೆ ದಾಟುತ್ತಿದ್ದ ಯುವತಿಗೆ ವೇಗವಾಗಿ ಬಂದ ಬೈಕ್​​ ಡಿಕ್ಕಿಯಾದ ಪರಿಣಾಮ ಮೃತಪಟ್ಟಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ. ಯೋಗೇಶ್ವರಿ (26) ಮೃತ ದುರ್ದೈವಿ. ರಾಜಾಜಿನಗರದ HDFC ಬ್ಯಾಂಕ್ ಹೋಮ್ ಲೋನ್ ವಿಭಾಗದಲ್ಲಿ ಉದ್ಯೋಗಿಯಾಗಿದ್ದ ಯೋಗೇಶ್ವರಿ, ಮಧ್ಯಾಹ್ನ ಊಟ ತರಲು ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. 

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅವರನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಬೈಕ್ ಸವಾರನ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಘಟನೆಗೆ ಬಗ್ಗೆ ತನಿಖೆ ನಡೆಯುತ್ತಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *