ತುಂಗಭದ್ರಾ ಡ್ಯಾಂ ಗೇಟ್ ರಿಪೇರಿ ಮಂದಗತಿ.

ತುಂಗಭದ್ರಾ ಡ್ಯಾಂ ಗೇಟ್ ರಿಪೇರಿ ಮಂದಗತಿ.

ನೀರು ಸಂಗ್ರಹಕ್ಕೆ ಆತಂಕ – ರೈತರಲ್ಲಿ ಚಿಂತೆ

ಬಳ್ಳಾರಿ: ತುಂಗಭದ್ರಾ ಡ್ಯಾಂ  ಕಲ್ಯಾಣ ಕರ್ನಾಟಕದ ಜೀವನಾಡಿ. ಈ ಡ್ಯಾಂ‌‌ನ ಕ್ರೆಸ್ಟ್ ಗೇಟ್‌ಗಳ ರಿಪೇರಿ ಕಾರ್ಯ ಮಂದಗತಿಯಲ್ಲಿ ಸಾಗುತ್ತಿದೆ. ಕುಂಟುತ್ತಾ ಸಾಗಿರುವ ಗೇಟ್ ರಿಪೇರಿ ಕಾರ್ಯದಿಂದ ರೈತರು ಆತಂಕಗೊಂಡಿದ್ದಾರೆ. ಮೇ ತಿಂಗಳ ಅಂತ್ಯದೊಳಗೆ ಡ್ಯಾಂ ಗೇಟ್ ರಿಪೇರಿ ಕಾರ್ಯ ಮುಗಿಯದಿದ್ದರೇ ಡ್ಯಾಂ‌ನಲ್ಲಿ ನೀರು ಸಂಗ್ರಹಿಸುವುದು ಕಷ್ಟ ಎನ್ನುತ್ತಿದ್ದಾರೆ.

ಜನರು ಹಾಗೂ ರೈತರಲ್ಲಿ ಆತಂಕ

ಕಲ್ಯಾಣ ಕರ್ನಾಟಕ ಭಾಗದ ಜೀವನಾಡಿ ತುಂಗಭದ್ರಾ ಡ್ಯಾಂ. ತುಂಗಭದ್ರಾ ಡ್ಯಾಂ ಕ್ರೆಸ್ಟ್​ ಗೇಟ್ ರಿಪೇರಿ ಕಾರ್ಯ ನಡೆದು ಎರಡ್ಮೂರು ತಿಂಗಳುಗಳೇ ಕಳೆದಿವೆ. ಆದರೆ ಈವರಗೆ ಕೇವಲ ಒಂದೇ ಒಂದು ಗೇಟ್ ರಿಪೇರಿ ಕಾರ್ಯ ಪೂರ್ಣಗೊಂಡಿದೆ. ಕುಂಟುತ್ತಾ ಸಾಗಿರುವ ಟಬಿ ಡ್ಯಾಂ ಗೇಟ್ ರಿಪೇರಿ ಕಾರ್ಯದಿಂದ ಜನರು ಹಾಗೂ ರೈತರು ಆತಂಕಗೊಂಡಿದ್ದಾರೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣ ಹಾಗೂ ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಡ್ಯಾಂ 19 ನೇ ಕ್ರೆಸ್ಟ್ ಗೇಟ್ ಕಳೆದ ವರ್ಷ ನೀರಿನ ರಭಸಕ್ಕೆ ಕಿತ್ತುಹೋಗಿತ್ತು. ಆಗ ನೂರಾರು ಟಿಎಮ್‌ಸಿ ನೀರು ವ್ಯರ್ಥವಾಗಿ ಹರಿದು ಸಮುದ್ರ ಸೇರುವಂತಾಗಿತ್ತು. ಹೀಗಾಗಿ ಎಚ್ಚೆತ್ತ ಸರ್ಕಾರ ಈ ವರ್ಷ 33 ಗೇಟ್ ಹೊಂದಿರುವ ಟಿಬಿ ಡ್ಯಾಂನ ಎಲ್ಲಾ ಗೇಟ್ ರಿಪೇರಿ ಕಾರ್ಯಕ್ಕೆ ಮುಂದಾಗಿತ್ತು. ಸರ್ಕಾರ ತೆಗೆದುಕೊಂಡಿರುವ ಕಾರ್ಯ ಉತ್ತಮವಾಗಿದ್ದು, ಆದರೆ ರಿಪೇರಿ ಕಾರ್ಯ ಮಾತ್ರ ಮಂದಗತಿಯಲ್ಲಿ ಸಾಗಿದೆ. ಹೀಗಾಗಿ ಶೀಘ್ರ ಗೇಟ್ ರಿಪೇರಿ ಕಾರ್ಯ ಪೂರ್ಣಗೊಳಿಸಬೇಕು ಅಂತಾ ಸ್ಥಳೀಯರಾದ ಸಂತೋಷ್​​ ಎಂಬುವವರು ಒತ್ತಾಯಿಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *