ಫಾರಿನ್ ಟ್ರಿಪ್ ವಿಚಾರಕ್ಕೆ ಗಲಾಟೆ: ಗೃಹಿಣಿ ನೇಣುಬಿಗಿದು ಸಾ*.

ಫಾರಿನ್ ಟ್ರಿಪ್ ವಿಚಾರಕ್ಕೆ ಗಲಾಟೆ: ಗೃಹಿಣಿ ನೇಣುಬಿಗಿದು ಸಾ*.

ಪ್ರವಾಸ ವಿಚಾರಕ್ಕೆ ದಂಪತಿ ಜಗಳ, ಆತ್ಮಹ*ಆರೋಪ.

ಮೈಸೂರು: ಪ್ರವಾಸದ ವಿಚಾರಕ್ಕೆ ಗಂಡ ಹೆಂಡ್ತಿ ನಡುವೆ ಗಲಾಟೆಯಾಗಿದ್ದು, ಬಳಿಕ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನ ಸರಸ್ವತಿಪುರಂನಲ್ಲಿ ನಡೆದಿದೆ. ಪ್ರವಾಸಕ್ಕೆ ತೆರಳಲು ಪತಿ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಮನನೊಂದು 46 ವರ್ಷದ ಸಂಧ್ಯಾ ಎಂಬುವವರು ಫ್ಯಾನ್‌ಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಆದರೆ, ಈ ಸಾವಿನ ಸುತ್ತ ಇದೀಗ ಕುಟುಂಬದ ಸದಸ್ಯರ ನಡುವೆಯೇ ಆರೋಪ-ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ. ಹೀಗಾಗಿ ಗೃಹಿಣಿ ಸಂಧ್ಯಾ ಆತ್ಮಹತ್ಯೆ ಪ್ರಕರಣವು ಇದೀಗ ತೀವ್ರ ತಿರುವು ಪಡೆದುಕೊಂಡಿದೆ.

ಕಳೆದ ಬುಧವಾರ ಸಂಜೆ ಪ್ರವಾಸಕ್ಕೆ (ಫಾರಿನ್ ಟ್ರಿಪ್) ಹೋಗುವ ವಿಚಾರವಾಗಿ ದಂಪತಿ ನಡುವೆ ಗಲಾಟೆಯಾಗಿತ್ತು ಎನ್ನಲಾಗಿದೆ. ಗಲಾಟೆಯ ನಂತರ ರಂಗನಾಥ್ ಮನೆಯಿಂದ ಹೊರಹೋಗಿದ್ದ ಸಮಯದಲ್ಲಿ ಸಂಧ್ಯಾ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ.

ಮೂಲತಃ ಬೆಂಗಳೂರಿನವರಾದ ಸಂಧ್ಯಾ ಅವರು 25 ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲೆಯ ರಂಗನಾಥ್ ಅವರನ್ನು ವಿವಾಹವಾಗಿದ್ದರು. ಈ ದಂಪತಿಗೆ ಸೃಷ್ಟಿ ಎಂಬ ಪುತ್ರಿ ಹಾಗೂ ಕೌಶಿಕ್ ಎಂಬ ಪುತ್ರನಿದ್ದಾನೆ. ಸೃಷ್ಟಿ ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದರೆ, ಕೌಶಿಕ್ ತಂದೆ-ತಾಯಿಯೊಂದಿಗೆ ಮೈಸೂರಿನಲ್ಲಿ ನೆಲೆಸಿದ್ದಾನೆ.

ತಾಯಿಯನ್ನು ಅನುಮಾನದಿಂದ ನೋಡುತ್ತಿದ್ದರು

ನನ್ನ ತಾಯಿ ಸಂಧ್ಯಾಳ ಸಾವು ಕೇವಲ ಆತ್ಮಹತ್ಯೆಯಲ್ಲ, ಇದೊಂದು ಕೊಲೆ ಎಂದು ಮೃತ ಸಂಧ್ಯಾ ಅವರ ಪುತ್ರಿ ಸೃಷ್ಟಿ ಗಂಭೀರ ಆರೋಪ ಮಾಡಿದ್ದಾರೆ. ‘ನನ್ನ ತಂದೆ ಮತ್ತು ಸಹೋದರ ಸೇರಿಕೊಂಡು ತಾಯಿಗೆ ಕಿರುಕುಳ ನೀಡುತ್ತಿದ್ದರು. ತಂದೆ ಯಾವಾಗಲೂ ತಾಯಿಯನ್ನು ಅನುಮಾನದಿಂದ ನೋಡುತ್ತಿದ್ದರು ಹಾಗೂ ಹಣದ ವಿಷಯಕ್ಕೆ ಗಲಾಟೆ ಮಾಡುತ್ತಿದ್ದರು. ತಂದೆ ಜೊತೆ ಸೇರಿಕೊಂಡು ನನ್ನ ಸಹೋದರ ಕೆಟ್ಟ ಬುದ್ಧಿ ಕಲಿತ್ತಿದ್ದಾನೆ. ತಂದೆ ಹಾಗೂ ನನ್ನ ಸಹೋದರ ಪ್ರತಿನಿತ್ಯ ದುಡ್ಡು ದುಡ್ಡು ಎನ್ನುತ್ತಾರೆ.  ನನ್ನ ತಾಯಿಯ ಸಾವಿಗೆ ಇವರಿಬ್ಬರೇ ಕಾರಣ, ಅವರಿಗೆ ಕಠಿಣ ಶಿಕ್ಷೆಯಾಗಬೇಕು. ನನ್ನ ತಾಯಿಯ ಅಂತ್ಯಸಂಸ್ಕಾರವನ್ನು ಇವರು ಮಾಡಬಾರದು. ಬದಲಿಗೆ ನನ್ನ ಮಾವ ಮಾಡಬೇಕು’ ಎಂದು ಸೃಷ್ಟಿ ಆಕ್ರೋಶ ಹೊರಹಾಕಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *