ಜುನೈದ್ ಅಹ್ಮದ್ ಕುರಿತು ಮಾಹಿತಿ ನೀಡಿದವರಿಗೆ 5 ಲಕ್ಷ ರೂ. ಬಹುಮಾನ – NIA ಘೋಷಣೆ.

ಜುನೈದ್ ಅಹ್ಮದ್ ಕುರಿತು ಮಾಹಿತಿ ನೀಡಿದವರಿಗೆ 5 ಲಕ್ಷ ರೂ. ಬಹುಮಾನ – NIA ಘೋಷಣೆ.

ಲಷ್ಕರ್-ಎ-ತೊಯಿಬಾ ಉಗ್ರ ಜುನೈದ್ ಅಹ್ಮದ್ ಮೇಲೆ ತನಿಖೆಗೆ ನೆರವಾಗುವವರಿಗೆ ನಗದು ಬಹುಮಾನ

ಬೆಂಗಳೂರು: ಲಷ್ಕರ್ ಎ ತೊಯ್ಬಾ ಉಗ್ರ ಜುನೈದ್ ಅಹ್ಮದ್ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ ಘೋಷಿಸಿದೆ. 33 ವರ್ಷ ವಯಸ್ಸಿನ ಉಗ್ರ ಜುನೈದ್ ಅಹ್ಮದ್ ಘೋಷಿತ ಅಪರಾಧಿಯಾಗಿದ್ದು, ಶಸ್ತ್ರಾಸ್ತ್ರ, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡ ಪ್ರಕರಣದಲ್ಲಿ ಎನ್​ಐಎಗೆ ಬೇಕಾಗಿದ್ದಾನೆ. ಜುಲೈ 2023 ರಲ್ಲಿ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈತ ವಿವಿಧ ಹೆಸರುಗಳನ್ನಿಟ್ಟುಕೊಂಡು ಬೆಂಗಳೂರಿನ ನಾಗಶೆಟ್ಟಿಹಳ್ಳಿಯ ಮಲ್ಲಿಗೆ ಲೇಔಟ್​​ನಲ್ಲಿ ವಾಸಿಸುತ್ತಿದ್ದ.

ಜುನೈದ್ ಅಹ್ಮದ್ ಬಂಧನಕ್ಕೆ ನೆರವಾಗುವಂಥ ಯಾವುದೇ ಮಾಹಿತಿಯನ್ನು ನೀಡುವವರಿಗೆ ಬಹುಮಾನ ನೀಡಲಾಗುವುದು. ಮಾಹಿತಿದಾರರ ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು ಎನ್​ಐಎ ಹೇಳಿದೆ. ಮಾಹಿತಿಯನ್ನು 080-29510900 ಅಥವಾ 8904241100 ಗೆ ಕರೆ ಮಾಡಿ ಹಂಚಿಕೊಳ್ಳಬಹುದು. ಜುನೈದ್ ಅಹ್ಮದ್ ಎಂಬ ಉಗ್ರ ಜುನೈದ್, ಜೆಡಿ ಜಮ್ಶೀದಾ, ಜಾನ್, ಸುಹಾನಾ, ಡಿಜೆ ರಿಟ್ಜ್, ಜಮೀಲಾ ಮತ್ತು ಜನ್ನು ಎಂಬ ಹೆಸರುಗಳಿಂದ ಗುರುತಿಸಿಕೊಂಡಿದ್ದ ಎನ್ನಲಾಗಿದೆ.

ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಅಧಿಕಾರಿಗಳು ಬೆಂಗಳೂರಿನ ಪರಪ್ಪನ ಅಗಹಾರದಲ್ಲಿರುವ ಕೇಂದ್ರ ಕಾರಾಗೃಹದಿಂದ 2023 ರ ಜುಲೈನಲ್ಲಿ ಐವರು ಭಯೋತ್ಪಾದಕ ಶಂಕಿತರನ್ನು ಬಂಧಿಸಿದ್ದರು. ಅವರನ್ನು ಎಲ್‌ಇಟಿ ಉಗ್ರನೊಬ್ಬ ನಗರದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸೆಳೆದುಕೊಂಡಿದ್ದು ಬಯಲಾಗಿತ್ತು. ಆರೋಪಿಗಳಿಂದ ಏಳು ದೇಶೀಯ ಪಿಸ್ತೂಲ್‌ಗಳು, 45 ಜೀವಂತ ಸುತ್ತುಗಳು, ವಾಕಿ-ಟಾಕಿ ಸೆಟ್‌ಗಳು, ಒಂದು ಚಾಕು ಮತ್ತು 12 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *