ಮೇ–ಜೂನ್ ವೇಳೆಗೆ ಮೂರು ಡಿಟಿಜಿ ರೈಲು ಸೇವೆಗೆ ಸೇರುವ ಸಾಧ್ಯತೆ.
ಬೆಂಗಳೂರು: ನಗರದ ಮೆಟ್ರೋ ಸಂಚಾರದಲ್ಲಿ ಉಂಟಾಗುತ್ತಿರುವ ತೀವ್ರ ಜನಸಂದಣಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ವಿಶೇಷವಾಗಿ ಪರ್ಪಲ್ ಹಾಗೂ ಗ್ರೀನ್ ಮಾರ್ಗಗಳಲ್ಲಿ ಪ್ರಯಾಣಿಕರು ತೀವ್ರ ಅಸೌಕರ್ಯ ಅನುಭವಿಸುತ್ತಿದ್ದಾರೆ. ವಾರದಲ್ಲಿ ಸರಾಸರಿ ಪ್ರಯಾಣಿಕರ ಸಂಖ್ಯೆ 10 ಲಕ್ಷದ ಗಡಿಯನ್ನು ದಾಟಿದೆ ಎನ್ನಲಾಗಿದೆ. ಈ ಸಮಸ್ಯೆಗೆ ತಾತ್ಕಾಲಿಕ ಪರಿಹಾರವಾಗಿ ಮೇ–ಜೂನ್ ವೇಳೆಗೆ ಮೂರು ಹೊಸ ರೈಲುಗಳನ್ನು ಸೇವೆಗೆ ಸೇರಿಸುವ ಯೋಜನೆ ರೂಪಿಸಲಾಗಿದೆ.
ಇನ್ನೆರಡೇ ತಿಂಗಳಲ್ಲಿ ಟೀಟಾಘರ್ನಿಂದ ರೈಲು ಪೂರೈಕೆ
ಪಶ್ಚಿಮ ಬಂಗಾಳ ಮೂಲದ ಟೀಟಾಘರ್ನಿಂದ(ಟಿಆರ್‌ಎಸ್‌ಎಲ್) ಫೆಬ್ರವರಿ 18ರಂದು ಪರ್ಪಲ್ ಮತ್ತು ಗ್ರೀನ್ ಮಾರ್ಗಗಳಿಗೆ ಮೀಸಲಾಗಿರುವ 20 ಡಿಟಿಜಿ (ಡಿಸ್ಟೆನ್ಸ್-ಟು-ಗೋ) ರೈಲುಗಳಲ್ಲಿ ಮೊದಲನೆಯ ರೈಲನ್ನು ರವಾನಿಸಲಾಗಿದೆ. ಈ ರೈಲು ಫೆಬ್ರವರಿ ಅಂತ್ಯದೊಳಗೆ ಪೀಣ್ಯ ಡಿಪೋಗೆ ತಲುಪಲಿದ್ದು, ಅಲ್ಲಿಗೆ ತಲುಪಿದ ಬಳಿಕ ಆರು ಕೋಚ್‌ಗಳನ್ನು ಜೋಡಿಸಿ ಸಂಪೂರ್ಣ ರೈಲಾಗಿ ರೂಪಿಸಲಾಗುತ್ತದೆ. ನಂತರ ಸ್ಥಿರ ಹಾಗೂ ವಿದ್ಯುತ್ ವಲಯ ಪರೀಕ್ಷೆಗಳು ನಡೆಯಲಿದ್ದು, ಬಳಿಕ ಮುಖ್ಯ ಮಾರ್ಗದಲ್ಲಿ ರಾತ್ರಿ ವೇಳೆ 750 ಕಿಲೋಮೀಟರ್ ಪ್ರಯೋಗಾತ್ಮಕ ಸಂಚಾರ ನಡೆಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
2019ರಲ್ಲಿ ಚೀನಾದ ಸರ್ಕಾರಿ ಕಂಪನಿ ರೂ.1,578 ಕೋಟಿ ಮೌಲ್ಯದ ಒಪ್ಪಂದದಡಿ ಒಟ್ಟು 36 ರೈಲುಗಳನ್ನು ಪೂರೈಕೆ ಮಾಡುವ ಹೊಣೆ ಹೊತ್ತಿತ್ತು. ಇದರಲ್ಲಿ 15 ರೈಲುಗಳು ಯೆಲ್ಲೋ ಲೈನ್‌ಗೆ ಮತ್ತು 21 ರೈಲುಗಳು ಪರ್ಪಲ್ ಹಾಗೂ ಗ್ರೀನ್ ಮಾರ್ಗಗಳಿಗೆ ಮೀಸಲಾಗಿದ್ದವು. ಎರಡು ಪ್ರೋಟೋಟೈಪ್ ರೈಲುಗಳನ್ನು ಈಗಾಗಲೇ ಪೂರೈಸಲಾಗಿದ್ದು, ಉಳಿದ ರೈಲುಗಳನ್ನು ಟಿಆರ್‌ಎಸ್‌ಎಲ್ ನಿರ್ಮಿಸುತ್ತಿದೆ. ಇದುವರೆಗೆ ಯೆಲ್ಲೋ ಲೈನ್‌ಗೆ ಎಂಟು ರೈಲುಗಳನ್ನು ಮಾತ್ರ ವಿತರಿಸಲಾಗಿದೆ.
For More Updates Join our WhatsApp Group :




