ಗದಗ ಬಸ್ ನಿಲ್ದಾಣದಲ್ಲಿ ಭೀಕರ ಅಪಘಾತ.

ಗದಗ ಬಸ್ ನಿಲ್ದಾಣದಲ್ಲಿ ಭೀಕರ ಅಪಘಾತ.

ಸರ್ಕಾರಿ ಬಸ್ ಹರಿದು ಮಹಿಳೆಗೆ ಕಾಲು ಕಟ್, ಇನ್ನಿಬ್ಬರಿಗೆ ಗಂಭೀರ ಗಾಯ.

ಗದಗ : ಚಾಲಕನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯಕ್ಕೆ ಅಮಾಯಕ ಪ್ರಯಾಣಿಕರು ಬಲಿಯಾಗುತ್ತಿರುವ ಘಟನೆಗಳು ಮುಂದುವರಿದಿವೆ. ಗದಗ ನಗರದ ಹೊಸ ಬಸ್ ನಿಲ್ದಾಣದಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (KKRTC) ಬಸ್ ಹರಿದು ಮೂವರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಯಚೂರು ವಿಭಾಗದ ಮಾಸ್ಕಿ ಡಿಪೋಗೆ ಸೇರಿದ ಬಸ್ ಚಾಲಕ, ನಿಲ್ದಾಣದ ಒಳಗೆ ಅತಿವೇಗವಾಗಿ ಬಸ್ ಚಾಲನೆ ಮಾಡಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ಬಸ್‌ಗಾಗಿ ಕಾಯುತ್ತಿದ್ದ ಮಹಿಳೆಯರ ಮೇಲೆ ಬಸ್ ಹರಿದಿದೆ.

ಸುನಗ ಗ್ರಾಮದ ನಿವಾಸಿ ಶಾಂತವ್ವ ಸಿದ್ದಪ್ಪ ಕೊರ್ತಿ ಎಂಬುವವರು ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಚಕ್ರ ಹರಿದ ಪರಿಣಾಮ ಅವರ ಕಾಲು ತುಂಡಾಗಿದ್ದು, ಬೆನ್ನಿನ ಭಾಗಕ್ಕೂ ಗಂಭೀರ ಗಾಯಗಳಾಗಿವೆ. ಥಮಿಕ ಚಿಕಿತ್ಸೆಯ ನಂತರ ಶಾಂತವ್ವ ಅವರ ಸ್ಥಿತಿ ಚಿಂತಾಜನಕವಾಗಿದ್ದರಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡದ ಎಸ್‌ಡಿಎಂ (SDM) ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಇಬ್ಬರು ಮಹಿಳೆಯರಿಗೂ ಗಂಭೀರ ಗಾಯಗಳಾಗಿವೆ. ಘಟನೆಗೆ ಸಂಬಂಧಿಸಿದಂತೆ ಗದಗ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿರ್ಲಕ್ಷ್ಯದ ಚಾಲನೆ ತೋರಿದ ಬಸ್ ಚಾಲಕನ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ. ಬಸ್ ನಿಲ್ದಾಣದ ಒಳಗೆ ಇಷ್ಟು ವೇಗವಾಗಿ ಬಸ್ ಚಲಿಸಲು ಕಾರಣವೇನು ಎಂಬ ಬಗ್ಗೆ ಸಾರಿಗೆ ಸಂಸ್ಥೆಯೂ ಆಂತರಿಕ ತನಿಖೆಗೆ ಆದೇಶಿಸಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *