ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ ವಿವಾಹಕ್ಕೆ ಪ್ರಧಾನಿ ಮೋದಿ ಶುಭ ಹಾರೈಕೆ.

ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ ವಿವಾಹಕ್ಕೆ ಪ್ರಧಾನಿ ಮೋದಿ ಶುಭ ಹಾರೈಕೆ.

ಫೆಬ್ರವರಿ 26, 2026: ಅದ್ಧೂರಿ ಮದುವೆ

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಅದ್ಧೂರಿಯಾಗಿ ವಿವಾಹವಾಗುತ್ತಿದ್ದಾರೆ. ನಾಳೆಕ್ಕೆ ನಡೆಯಲಿರುವ ವಿವಾಹಕ್ಕೆ ಅವರ ಆಪ್ತರು, ಕುಟುಂಬ ಸದಸ್ಯರು ಭಾಗವಹಿಸಿದ್ದಾರೆ. ಮಾರ್ಚ್ 04 ರಂದು ಹೈದರಾಬಾದ್​​ನಲ್ಲಿ ಅದ್ಧೂರಿ ರಿಸೆಪ್ಷನ್ ನಡೆಯಲಿದ್ದು ಹಲವು ಗಣ್ಯರು, ರಾಜಕಾರಣಿಗಳು ಆ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ಇದೀಗ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಹಾರೈಸಿದ್ದಾರೆ.

ವಿಜಯ್ ದೇವರಕೊಂಡ ಅವರ ತಂದೆ ಮತ್ತು ತಾಯಿ ಅವರು ಮೋದಿ ಅವರಿಗೆ ಆಹ್ವಾನ ಕಳಿಸಿ ಮದುವೆಗೆ ಆಹ್ವಾನಿಸಿದ್ದರು, ಇದೀಗ ಮೋದಿ ಅವರು ವಿಜಯ್ ದೇವರಕೊಂಡ ಪೋಷಕರ ಹೆಸರು ಸೂಚಿಸಿ ಪತ್ರ ಬರೆದು ವಧು-ವರರಿಗೆ ಶುಭ ಹಾರೈಸಿರುವ ಪ್ರಧಾನಿ ಮೋದಿ, ‘ಫೆಬ್ರವರಿ 26, 2026 ರಂದು ನಡೆಯಲಿರುವ ವಿಜಯ್ ಮತ್ತು ರಶ್ಮಿಕಾ ಅವರ ವಿವಾಹಕ್ಕೆ ನೀವು ನೀಡಿದ ಆಮಂತ್ರಣವನ್ನು ಸ್ವೀಕರಿಸಿ ಬಹಳ ಸಂತೋಷವಾಯಿತು. ಈ ಅತ್ಯಂತ ಹರ್ಷದಾಯಕ ಮತ್ತು ಮಂಗಳಕರ ಸಂದರ್ಭದಲ್ಲಿ ದೇವರಕೊಂಡ ಮತ್ತು ಮಂದಣ್ಣ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು’ ಎಂದಿದ್ದಾರೆ.

ಮುಂದುವರೆದು, ‘ಇದು ವಿಜಯ್ ಮತ್ತು ರಶ್ಮಿಕಾ ಅವರ ಜೀವನದಲ್ಲಿ ಒಂದು ಹೊಸ, ಸುಂದರ ಅಧ್ಯಾಯದ ಆರಂಭವನ್ನು ಸೂಚಿಸುತ್ತದೆ. ‘ಸಖಾ ಸಪ್ತಪದಾ ಭವ’ ಅಂದರೆ ಏಳು ಹೆಜ್ಜೆಗಳನ್ನು ಜೊತೆಯಾಗಿ ನಡೆಯುವ ಮೂಲಕ ದಂಪತಿಗಳು ಜೀವನಪರ್ಯಂತ ಸ್ನೇಹಿತರಾಗುತ್ತಾರೆ ಎಂಬ ಭಾವನೆಯೊಂದಿಗೆ ಈ ಪಯಣ ಆರಂಭವಾಗುತ್ತಿದೆ. ವಿಜಯ್ ಆಗಲಿ ಅಥವಾ ರಶ್ಮಿಕಾ ಆಗಲಿ ತಮ್ಮ ಚಲನಚಿತ್ರಗಳ ಚಿತ್ರಕಥೆಗಳಿಗೆ ಹೊಸಬರೇನಲ್ಲ. ಆದರೆ ಪ್ರೀತಿ ಮತ್ತು ಅನುರಾಗದಿಂದ ತುಂಬಿದ ಅವರ ನಿಜ ಜೀವನದ ಈ ದೈವಿಕವಾಗಿ ಬರೆಯಲ್ಪಟ್ಟ ಅಧ್ಯಾಯವು, ಅವರು ಬೆಳ್ಳಿತೆರೆಯ ಮೇಲೆ ಸೃಷ್ಟಿಸಿದ ಮ್ಯಾಜಿಕ್‌ಗಿಂತ ಖಂಡಿತವಾಗಿಯೂ ಮಿಗಿಲಾಗಿರುತ್ತದೆ ಎಂದಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *