ಬಾಗಲಕೋಟೆ ಕಲ್ಲು ತೂರಾಟ: ಶ್ರೀರಾಮುಲು NIA ತನಿಖೆಗೆ ಆಗ್ರಹ.

ಬಾಗಲಕೋಟೆ ಕಲ್ಲು ತೂರಾಟ: ಶ್ರೀರಾಮುಲು NIA ತನಿಖೆಗೆ ಆಗ್ರಹ.

ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದು ನ್ಯಾಯ ವ್ಯವಸ್ಥೆಗೆ ಕರೆ

ಬಾಗಲಕೋಟೆ : ಜಿಲ್ಲೆಯಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ಮತ್ತು ಚಪ್ಪಲಿ ಎಸೆದಿರುವ ಘಟನೆಯ ಬಗ್ಗೆ ಅಕ್ರೋಶದ ವ್ಯಕ್ತಪಡಿಸಿರುವ ಮಾಜಿ ಸಚಿವ ಹಾಗೂ ಸಂಸದ ಬಿ. ಶ್ರೀರಾಮುಲು, ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಕಳೆದ ಫೆಬ್ರವರಿ 19 ರಂದು ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ಸಾಗುತ್ತಿದ್ದಾಗ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಮೆರವಣಿಗೆಯ ಮೇಲೆ ಚಪ್ಪಲಿ ಎಸೆಯುವ ಮೂಲಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದು ಕೇವಲ ಸ್ಥಳೀಯ ಕಿಡಿಗೇಡಿತನವಲ್ಲ, ಇದರ ಹಿಂದೆ ದೊಡ್ಡ ಸಂಚು ಇರುವ ಸಾಧ್ಯತೆ ಇದೆ. ಹೀಗಾಗಿ ಸತ್ಯಾಸತ್ಯತೆ ಹೊರಬರಲು ಎನ್​ಐಎ ತನಿಖೆ ಅಗತ್ಯ ಎಂದು ಅವರು ಹೇಳಿದ್ದಾರೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಘಟನೆಗಳು ಸೇರಿದಂತೆ ರಾಜ್ಯದಲ್ಲಿ ಹಿಂದೂ ಸಂಘಟನೆಗಳ ಮೆರವಣಿಗೆ ಮೇಲೆ ನಡೆಯುತ್ತಿರುವ ದಾಳಿಗಳ ಮಾದರಿಯಲ್ಲೇ ಈ ಘಟನೆಯೂ ನಡೆದಿದೆ. ಇಂತಹ ಕೃತ್ಯಗಳು ಮರುಕಳಿಸದಂತೆ ಕಠಿಣ ಕ್ರಮಕ್ಕೆ ಶ್ರೀರಾಮುಲು ಒತ್ತಾಯಿಸಿದ್ದಾರೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಪೊಲೀಸರು ಎಂಟು ಜನರನ್ನು ಬಂಧಿಸಿದ್ದಾರೆ. ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರಿದಿದ್ದು, ಶಾಂತಿ ಕಾಪಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ. ಇನ್ನು ಇದಕ್ಕೂ ಮುನ್ನ ಕೆಲ ಮುಸ್ಲಿಂ ಯುವಕರು ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಾಕಾರಿ ವಿಡಿಯೋ ಹರಿಬಿಟ್ಟಿದ್ದು, ವಿವಾದಕ್ಕೆ ಗುರಿಯಾಗಿದೆ. ‘15 ನಿಮಿಷ ಪೊಲೀಸರು ಸುಮ್ಮನಿರಲಿ, ಇಸ್ಲಾಂ ಪವರ್ ತೋರಿಸುತ್ತೇವೆ’ ಎಂಬ ಅರ್ಥದ ಹೇಳಿಕೆಯನ್ನು ಪೋಸ್ಟ್‌ನಲ್ಲಿ ತೋರಿಸಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *